Cyclone ಎಫೆಕ್ಟ್, ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಕೆಲವೆಡೆ ಬಿರುಗಾಳಿ ಕೂಡಾ ಸಾಧ್ಯತೆ !
ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ (Rain alert) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಈ ಸಂಬಂಧ ಆಂಧ್ರ ಪ್ರದೇಶ, ಒಡಿಶಾ, ತಮಿಳುನಾಡಲ್ಲಿ ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಈಗ ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಅದು ತೀರಾ ತಲುಪುವಾಗ ಗಂಟೆಗೆ 100 ಕಿಮೀ ವೇಗದಲ್ಲಿ ಈ ಚಂಡಮಾರುತ ಇರಲಿದ್ದು, ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿ ತೀರಕ್ಕೆ ಬಂದು ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಕರ್ನಾಟಕಕ್ಕೂ ಸೈಕ್ಲೋನ್ ನ ಎಫೆಕ್ಟ್ ತಟ್ಟುವ ಎಲ್ಲಾ ಸಾಧ್ಯತೆಗಳು ಇದ್ದು, ಈ ಸಂಬಂಧ ಹವಾಮಾನ ಇಲಾಖೆ ಎಚ್ಚರ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನು ಓದಿ: Suicide case: ಬೆಳಗಿನ ತಿಂಡಿ ಕೊಡದ ಅಮ್ಮ- ಪ್ರಾಣವನ್ನೇ ಕಳೆದುಕೊಂಡ ಮಗ