Digital Marketing: ಉದ್ಯೋಗಾಕಾಂಕ್ಷಿಗಳೇ ಗಮನಿಸಿ- ಇಲ್ಲಿದೆ ನೋಡಿ ಕೈತುಂಬಾ ಸಂಬಳ ಸಿಗೋ ನೆಮ್ಮದಿ ಉದ್ಯೋಗವಕಾಶ
Job news career tips here is details about jobs in digital marketing
Digital Marketing: ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಇಂದಿನ ಸ್ಪರ್ಧತ್ಮಕ ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ. ಹೇಳಿ ಕೇಳಿ ಇದು ಡಿಜಿಟಲ್ ಯುಗ, ಈ ಯುಗದಲ್ಲಿ ಡಿಜಿಟಲಿಕರಣದಲ್ಲಿ ಮಾರ್ಕೆಟಿಂಗ್(Digital Marketing) ಕ್ಷೇತ್ರದಲ್ಲಿ ಗಣನೀಯ ಬದಲಾವಣೆಯಾಗುತ್ತಿದೆ.
ಡಿಜಿಟಲ್ ಮಾರ್ಕೆಟಿಂಗ್(Digital Marketing)ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಇಂಟರ್ನೆಟ್, ಇ-ಮೇಲ್ ಮಾರ್ಕೆಟಿಂಗ್ ಇತ್ಯಾದಿಗಳನ್ನು ಒಳಗೊಂಡಿದೆ. ನೀವು ಈ ಕ್ಷೇತ್ರದಲ್ಲಿ ನಿಮ್ಮ ವೃತ್ತಿಜೀವನವನ್ನು ಪ್ರಾರಂಭ ಮಾಡಲು ಬಯಸಿದರೆ, ಇದಕ್ಕಾಗಿ ಕೌಶಲ್ಯ ಅಭಿವೃದ್ಧಿ ಕೋರ್ಸ್ ಮಾಡಬಹುದು. 2021-22ರಲ್ಲಿ ಡಿಜಿಟಲ್ ವಲಯದಲ್ಲಿ ಹೆಚ್ಚಿನ ಉದ್ಯೋಗವಕಾಶಗಳು ದೊರೆಯುತ್ತಿವೆ. ಡಿಜಿಟಲ್ ಕ್ಷೇತ್ರವನ್ನು ದೇಶದ ಟಾಪ್ 5 ಉದ್ಯೋಗ ಒದಗಿಸುವ ಕ್ಷೇತ್ರಗಳಲ್ಲೊಂದು ಎಂದು ಪರಿಗಣಿಸಲಾಗುತ್ತದೆ.
ಟಾಪ್ 5 ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಗಳು ಹೀಗಿವೆ:
* ಎಸ್ಇಒ ಸ್ಪೆಷಲಿಸ್ಟ್
* ಪ್ರಾಡಕ್ಟ್ ಮಾರ್ಕೆಟಿಂಗ್ ಸ್ಪೆಷಲಿಸ್ಟ್ ಪೆಡ್
* ಮಾರ್ಕೆಟಿಂಗ್ ಸ್ಪೆಷಲಿಸ್ಟ್
* ಕಂಟೆಂಟ್ ಮಾರ್ಕೆಟರ್
* ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್
ಇದನ್ನೂ ಓದಿ: Gmail New Features: ಜೀಮೇಲ್ ಬಳಕೆದಾರರಿಗೆ ಸಂತಸದ ಸುದ್ದಿ !! ಕೇಳಿದ್ರೆ ಖಂಡಿತಾ ಖುಷಿ ಪಡ್ತೀರಾ