Home Karnataka State Politics Updates C M Siddaramaiah: ಮುಸ್ಲಿಂಮರಿಗೆ ದೇಶದ ಸಂಪತ್ತನ್ನು ಹಂಚುತ್ತೇನೆ – ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ!!

C M Siddaramaiah: ಮುಸ್ಲಿಂಮರಿಗೆ ದೇಶದ ಸಂಪತ್ತನ್ನು ಹಂಚುತ್ತೇನೆ – ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ!!

C M Siddaramaiah

Hindu neighbor gifts plot of land

Hindu neighbour gifts land to Muslim journalist

C M Siddaramaiah: ಮುಸ್ಲಿಂರಿಗೆ 10 ಸಾವಿರ ಕೋಟಿಯಷ್ಟು ಅನುದಾನ ನೀಡಬೇಕೆಂಬುದು ಉದ್ದೇಶ. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ನಿಮಗೆ ಅನ್ಯಾಯವಾಗೋಕೆ ಬಿಡಲ್ಲ. ದೇಶದ ಸಂಪತ್ತನ್ನು ನಿಮಗೂ ಹಂಚುತ್ತೇನೆ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯನವರು(C M Siddaramaiah) ಹೇಳಿದ್ದಾರೆ.

ಅಂದಹಾಗೆ ಹುಬ್ಬಳ್ಳಿಯಲ್ಲಿ(Hubballi) ಸೋಮವಾರ ನಡೆದ ದಕ್ಷಿಣ ಭಾರತದ ಮೌಲ್ವಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ದೇಶದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗಲು ಬಿಡೊಲ್ಲ. ಮುಸ್ಲಿಮರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ. ದೇಶದ ಸಂಪತ್ತಿನಲ್ಲಿ ನಿಮಗೂ ಹಂಚುತ್ತೇವೆ. ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ 4 ಸಾವಿರದಿಂದ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವುದರಲ್ಲಿ ಯಾವುದೇ ತಪ್ಪಿಲ್ಲ. ಮುಂದೆ ಅಲ್ಪಸಂಖ್ಯಾತ ಇಲಾಖೆಗೆ 10 ಸಾವಿರ ಕೋಟಿ ಅನುದಾನ ನೀಡುತ್ತೇವೆ ಎಂದು ಹೇಳಿದ್ದರು.

ಸಿಎಂ ಸಿದ್ದರಾಮಯ್ಯನವರು ಈ ರೀತಿಯಾಗಿ ಹೇಳಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರ ನಿನ್ನೆ ದಿನ ವಿಧಾನಸಭೆ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿರುವ ಬಿಜೆಪಿ ಮುಖಂಡರು ಮುಸ್ಲಿಮರಿಗೆ ಏನು ಅನ್ಯಾಯ ಆಗಿದೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕೋಸ್ಕರ ಮುಸ್ಲಿಂ ತುಷ್ಟೀಕರಣ ಮುಂದುವರಿಸಿದೆ. ಈ ರೀತಿ ಓಲೈಸಿಯೇ ಮುಸ್ಲಿಮರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ವೋಟ್ ಬ್ಯಾಂಕ್ ರಾಜಕಾರಣವಲ್ಲದೆ ಬೇರೇನೂ ಅಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದರು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ತಮ್ಮ “ಹೇಳಿಕೆಯಲ್ಲಿ ತಪ್ಪೇನಿದೆ?” ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಯ ಒಂದು ಭಾಗವನ್ನು ಮಾತ್ರ ಸಮರ್ಥವಾಗಿ ಹೈಲೈಟ್ ಮಾಡಿ, ಇನ್ನೊಂದು ಭಾಗವನ್ನು ನಿರ್ಲಕ್ಷಿಸಿರುವ ಮಾಧ್ಯಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಮುಸ್ಲಿಮರು ಸೇರಿದಂತೆ ಎಲ್ಲರನ್ನೂ ರಕ್ಷಿಸುತ್ತೇವೆ ಎಂದು ಹೇಳಿದ್ದೇನೆ. ಇದು ಓಲೈಕೆಯೇ, ತುಷ್ಟೀಕರಣವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Mother tongue education: ಕನ್ನಡಿಗರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ!!