CM Siddaramaiah: ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ- ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯ ಕೊಟ್ರು ಮತ್ತೊಂದು ಬಿಗ್ ಅಪ್ಡೇಟ್!!
CM siddaramayya announced good news for gurantee scheme benificiaries
CM Siddaramaiah: ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah)ಗುಡ್ ನ್ಯೂಸ್(Good News)ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದೇ ಇರುವ ಅರ್ಹ ಕೆಲ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಂತೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಇರುವ ತಾಂತ್ರಿಕ ಅಡಚಣೆಗಳನ್ನು ಶೀಘ್ರವೇ ನಿವಾರಣೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ, ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಲಹೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನು ಓದಿ: PM Narendra Modi: ಇನ್ಮುಂದೆ ಯಾರೂ ನನ್ನನ್ನು ಹೀಗೆ ಕರೆಯಕೂಡದು – ಪ್ರಧಾನಿ ಮೋದಿಯ ಅಚ್ಚರಿ ಹೇಳಿಕೆ