Belagavi Winter Session: ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್- ಮುಂದಿನ ವರ್ಷದಿಂದಲೇ ಸೈಕಲ್ ವಿತರಣೆ , ಆದರೆ ಸೈಕಲ್ ಸಿಗೋದು ಇನ್ನು ಈ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ!!
Karnataka news free bicycle distribution programme for students next year says madhu bangarappa in Belagavi winter season
Belagavi Winter Session : ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರೌಢಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ಯೋಜನೆಗೆ ನೀಡುತ್ತಿದ್ದರು. ಈ ಯೋಜನೆಗೆ ಮರು ಚಾಲನೆ ಸಿಗುವ ಸಾಧ್ಯತೆ ದಟ್ಟವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಈ ಕುರಿತಾಗಿ ಮಹತ್ವದ ಮಾಹಿತಿ ನೀಡಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ (MLA Pradeep Easwar) ಅವರು ಪ್ರಶ್ನೋತ್ತರದ ಸಂದರ್ಭ ಸರ್ಕಾರಿ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್ ವಿತರಣೆ ಮಾಡಬೇಕೆಂದು ಒತ್ತಾಯ ಮಾಡಿದರು.ಈ ಸಂದರ್ಭ ಸಚಿವ ಮಧು ಬಂಗಾರಪ್ಪ, ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವ ಭರವಸೆ ನೀಡಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆ ಮಾಡುವ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆ ಜತೆ ಚರ್ಚಿಸಿ ಕ್ರಮ ವಹಿಸುವುದಾಗಿ ಮಧು ಬಂಗಾರಪ್ಪ (Madhu Bangarappa in Belagavi Winter Session) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Cyclone Maichang: ಮೈಚಾಂಗ್ ಚಂಡಮಾರುತ ಎಫೆಕ್ಟ್- ಈ 2 ದಿನ ರಾಜ್ಯಾದ್ಯಂತ ಸಿಕ್ಕಾಪಟ್ಟೆ ಮಳೆ !!