Good News For Students: ಶಾಲಾ ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್ – ನಿಮಗಿನ್ನು ಪ್ರತೀ ತಿಂಗಳು ಸಿಗುತ್ತೆ ಇಷ್ಟು ದುಡ್ಡು !!

Karnataka education news rs 600 per month transport allowance for rural students madhu bangarappa

Good News For Students: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ (Good News For Students) ಒಂದನ್ನು ನೀಡಿದ್ದಾರೆ. ಹೌದು, ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಆಸಕ್ತಿ ಇದ್ದರೂ, ಮನೆ ಮತ್ತು ಶಾಲೆಗೆ ದೂರವಿದ್ದು ಹಣದ ಕೊರತೆ ಇರುತ್ತದೆ. ಆದ್ದರಿಂದ ದೂರದ ಊರುಗಳ ಶಾಲೆಗಳ ತೆರಳುವ ಮಕ್ಕಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಶಿಕ್ಷಣ ಯೋಜನೆಯಡಿ ರೂ.600 ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳ ಮೂಲಕ ಶಾಲೆಗಳಿಗೆ ಹೋಗಲು ಉಚಿತ ಬಸ್‌ ಪಾಸ್‌ ವಿತರಿಸಲಾಗುತ್ತಿದೆ. ಅಂತೆಯೇ ದೂರದ ಊರುಗಳ ಶಾಲೆಗಳಿಗೆ ತೆರಳುವ ಮಕ್ಕಳಿಗೆ ಕೇಂದ್ರ ಸರ್ಕಾರದ ಪ್ರಾಯೋಜಿತ ʻಸಮಗ್ರ ಶಿಕ್ಷಣ ಕರ್ನಾಟಕʼ ಯೋಜನೆಯಡಿ ಆರು ತಿಂಗಳ ಅವಧಿಗೆ ಪ್ರತಿ ತಿಂಗಳಿಗೆ ರೂ.600 ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು. ಈ ಸಾಲಿನಲ್ಲಿ 9,604 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಮೋದಿಯಿಂದ ಹೊಸ ಗ್ಯಾರಂಟಿ ಘೋಷಣೆ !!

Leave A Reply

Your email address will not be published.