Jammu Kashmir article 370: ಆರ್ಟಿಕಲ್ 370 ರದ್ಧತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್- ಮೋದಿ ಸರ್ಕಾರಕ್ಕೆ ಕೊನೆಗೂ ಧಕ್ಕಿತು ಜಯ !!

Jammu Kashmir article 370 abrogation supreme court verdict case latest news

Supreme Court: ಜಮ್ಮು ಮತ್ತು ಕಾಶ್ಮೀರಕ್ಕೆ(Jammu and Kashmir) ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ(Special Status) ಪರಿಚ್ಛೇದ 370 (Article 370)ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ತೀರ್ಪನ್ನು ಇಂದು ಸೋಮವಾರ (ಡಿಸೆಂಬರ್ 11) ಸುಪ್ರೀಂ ಕೋರ್ಟ್‌(Supreme Court)ಪ್ರಕಟಿಸಿದೆ.

ಜಮ್ಮು ಕಾಶ್ಮೀರದ ಭಾರತದ ಅವಿಭಾಜ್ಯ ಅಂಗ, ಅದನ್ನು ನಿರಾಕರಿಸಲು ಸಾಧ್ಯವಿಲ್ಲ. ಆರ್ಟಿಕಲ್ 370ಯನ್ನು ಯುದ್ಧ ಸಮಯದಲ್ಲಿ ಮಾಡಲಾಗಿತ್ತು. ಅದಕ್ಕೂ ಮೊದಲು ಯುದ್ಧ ಸಮಯದಲ್ಲಿ ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ಇರಲಿಲ್ಲ. ಆರ್ಟಿಕಲ್ 370ಯನ್ನು ರದ್ದು ಮಾಡಲು ವಿಧಾನಸಭೆಗೆ ಅಧಿಕಾರವಿಲ್ಲ. ಆದರೆ ಭಾರತ ಸಂಸತ್ತಿಗೆ ಸಂಪೂರ್ಣ ಅಧಿಕಾರವಿದೆ. ಹೀಗಾಗಿ ಇದರ ರದ್ಧತಿಗೆ ರಾಜ್ಯದ ವಿಧಾನಮಂಡಲದ ಅನುಮತಿ ಅಗತ್ಯವಿಲ್ಲ.ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ಈ ನಡುವೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ನೇತೃತ್ವದ ಸಾಂವಿಧಾನಿಕ ಪೀಠವು ನಡೆಸಿದ ಸುದೀರ್ಘ ಅವಧಿಯ ವಿಚಾರಣೆಯನ್ನು ಅಂತಿಮಗೊಳಿಸಿ, ಈ ಕುರಿತು ತೀರ್ಪು ನೀಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ () ಕಲ್ಪಿಸುವ ಆರ್ಟಿಕಲ್ 370 ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಆರ್ಟಿಕಲ್‌ 370 ತಾತ್ಕಾಲಿಕವಾಗಿದ್ದು, ಆ ಕುರಿತು ಕ್ರಮ ಕೈಗೊಳ್ಳುವ ಅಧಿಕಾರ ರಾಷ್ಟ್ರಪತಿಗಳದ್ದು ಎಂದು ಸಾಂವಿಧಾನಿಕ ಪೀಠ ತಿಳಿಸಿದೆ. ಈ ಮೂಲಕ ಕೇಂದ್ರಕ್ಕೆ ಸರ್ಕಾರಕ್ಕೆ ಐತಿಹಾಸಿಕ ಗೆಲುವು ಸಿಕ್ಕಿದೆ.

ನ್ಯಾಷನಲ್ ಕಾನ್ಫರೆನ್ಸ್ ಸೇರಿ ಹಲವು ಪಕ್ಷಗಳು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿ ಆರ್ಟಿಕಲ್ 370 ಸಂವಿಧಾನ ವಿರೋಧಿ ಎಂದು ಕೇಂದ್ರದ ತೀರ್ಮಾನವನ್ನು ಪ್ರಶ್ನೆ ಮಾಡಿ ಇದನ್ನು ತಿರಸ್ಕರಿಸಬೇಕು ಎಂದು ಮನವಿ ಸಲ್ಲಿಸಿದ್ದವು. ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಆರ್ಟಿಕಲ್ 370 ಮತ್ತು ಜಮ್ಮು ಕಾಶ್ಮೀರ ವಿಭಜನೆಗೊಳಿಸಿದ ಕುರಿತು ಮೂರು ವಿಭಿನ್ನ ತೀರ್ಪನ್ನು ಪ್ರಕಟಿಸಿದ್ದಾರೆ. ಪಂಚ ಪೀಠದಿಂದ 3 ಭಾಗವಾಗಿ ಒಮ್ಮತದ ತೀರ್ಪು ಪ್ರಕಟಗೊಂಡಿದ್ದು, ಇದರಲ್ಲಿ ಜಮ್ಮು ಕಾಶ್ಮೀರವನ್ನು ವಿಭಜನೆಗೊಳಿಸಿರುವ ಸರ್ಕಾರದ ನಡೆಯನ್ನು ಸುಪ್ರೀಂ ಕೋರ್ಟ್ ಮಾನ್ಯಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದ್ದು, ಆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕುರಿತ ಗೊಂದಲಗಳಿಗೆ ತೆರೆ ಎಳೆದಿದೆ.

ಇದನ್ನೂ ಓದಿ: KAS ಸೇರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ ಬಿ’ಯ 276 ಹುದ್ದೆ ಭರ್ತಿಗೆ ಕ್ಷಣಗಣನೆ ಶುರು !!

Leave A Reply

Your email address will not be published.