CM Pinarayi: ಕೇರಳ ರಾಜ್ಯಪಾಲರ ಮೇಲೆ ದಾಳಿಗೆ ಸಿಎಂ ಪಿಣರಾಯಿ ಸಂಚು ?!

Share the Article

CM Pinarayi: ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು, “ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ (CM Pinarayi) ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಯತ್ನಿಸುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ ಫೆಡರೇಶನ್‌ ಆಫ್‌ ಇಂಡಿಯಾದ ಕಾರ್ಯಕರ್ತರು, ಭಾನುವಾರ ರಾತ್ರಿ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಖಾನ್‌ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ದಾಳಿ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ಖಾನ್‌, ಕಾರಿನಿಂದ ಇಳಿದು, ಎಸ್‌ಎಫ್‌ಐ ಕಾರ್ಯಕರ್ತರಿಗೆ ಸವಾಲು ಹಾಕಿದ್ದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಖಾನ್‌, ನನ್ನ ಮೇಲೆ ದೈಹಿಕವಾಗಿ ದಾಳಿ ಮಾಡಲು ಪಿತೂರಿ ನಡೆಸಿ ಸಿಎಂ ಅವರೇ ಜನರನ್ನು ಕಳುಹಿಸುತ್ತಿದ್ದಾರೆ ಎಂದು ನಾನು ಸ್ಪಷ್ಟವಾಗಿ ಹೇಳಬಲ್ಲೆ ಎಂದಿದ್ದಾರೆ.
ಅದಲ್ಲದೆ ಕಾಂಗ್ರೆಸ್, ಯುಡಿಎಫ್ ಮತ್ತು ಬಿಜೆಪಿ ಕೂಡ ದಾಳಿಯ ಹಿಂದೆ ಸಿಎಂ ಪಿಣರಾಯಿ ಕೈವಾಡವಿದೆ ಎಂದು ಆರೋಪಿಸಿವೆ.

ಇದನ್ನು ಓದಿ: CM Pinarayi: ಕೇರಳ ರಾಜ್ಯಪಾಲರ ಮೇಲೆ ದಾಳಿಗೆ ಸಿಎಂ ಪಿಣರಾಯಿ ಸಂಚು ?!

ಇನ್ನು ವಿಧಾನಸಭೆಯಲ್ಲಿ ಅಂಗೀಕಾರವಾದ ಬಾಕಿ ಇರುವ ಮಸೂದೆಗಳ ಕುರಿತು ನಿರ್ಧಾರಗಳನ್ನು ಕೈಗೊಳ್ಳುವ ವಿಚಾರದಲ್ಲಿ ರಾಜ್ಯಪಾಲ ಆರಿಫ್‌ ಮತ್ತು ರಾಜ್ಯ ಸರ್ಕಾರದ ನಡುವೆ ವಾದ ವಿವಾದಗಳು ನಡೆಯುತ್ತಲೇ ಇವೆ ಎನ್ನಲಾಗುತ್ತಿದೆ.

Leave A Reply