Santosh Lad: ಬೆಳಗಾವಿಯಲ್ಲಿ ಮದ್ಯಪ್ರಿಯರ ಬೃಹತ್ ಪ್ರತಿಭಟನೆ- ಬೇಡಿಕೆಗಳನ್ನು ಕೇಳಿ ಹೌಹಾರಿದ ಸಚಿವ ಸಂತೋಷ್ ಲಾಡ್ !!
Santosh Lad: ಬೆಳಗಾವಿ ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಯ ಸಲುವಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು (Protest) ನಡೆಸುತ್ತಿದೆ. ಈ ನಡುವೆ ಮದ್ಯ ಪ್ರಿಯರು ಕೂಡ ಪ್ರತಿಭಟನೆಗೆ ಮುಂದಾಗಿದ್ದು, ಸಚಿವ ಸಂತೋಷ್ ಲಾಡ್ ಅವರು ಮದ್ಯ ಪ್ರಿಯರ (Liquor Lovers)ವಿವಿಧ ಬೇಡಿಕೆ ಕೇಳಿ ಶಾಕ್ ಆಗಿದ್ದಾರೆ.
ಸುವರ್ಣಗಾರ್ಡನ್ ಟೆಂಟ್‌ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್(Santosh Lad)ಪ್ರತಿಭಟನಾನಿರತ ಮದ್ಯಪ್ರಿಯರ ಜೊತೆಗೆ ಕುಳಿತು ಸಮಸ್ಯೆ ಆಲಿಸಿದ್ದಾರೆ. ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್ ಅವರು ದಂಗಾಗಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.
ಮದ್ಯ ಪ್ರಿಯರು ಸಚಿವರ ಮುಂದಿಟ್ಟ ಬೇಡಿಕೆಗಳು ಏನೆಲ್ಲ ಗೊತ್ತಾ??
* ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು
* ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು.
* ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು
* ಮದ್ಯ ಮಾರಾಟದಿಂದ ಬರುವ ಆದಾಯದ ಶೇಕಡ 10 ರಷ್ಟು ಮೀಸಲಿಡಬೇಕು.
* ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು
* ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿಪಡಿಸಬೇಕು
* ಬಾರ್‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು
* ಮದ್ಯಪ್ರಿಯರ ಭವನ ಸ್ಥಾಪಿಸಬೇಕು
* ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು
* ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು
* ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು
ಹೀಗೆ ಅನೇಕ ಬೇಡಿಕೆಗಳನ್ನು ಪಾನ ಪ್ರಿಯರು ಸಚಿವರ ಮುಂದಿಟ್ಟಿದ್ದು, ಸರಕಾರದ ಗಮನಕ್ಕೆ ತರುವ ಆಶ್ವಾಸನೆಯನ್ನು ಸಚಿವರು ನೀಡಿದ್ದಾರೆ.