Security Breach: ಸಂಸತ್ ಭದ್ರತಾ ಲೋಪ- ಲೋಕಸಭೆಯಲ್ಲಿ ಮಗನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಪಿತೂರಿಯೇ?! ಅರೆ ಏನಪ್ಪಾ ಇದು ಶಾಕಿಂಗ್ ನ್ಯೂಸ್?!

Political news security Breach in LokSabha lehar Singh siroya reacted for this case

Security Breach: ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಪ(Security Breach)ಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್ ಶರ್ಮಾ( Sagar Sharma) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಲೋಕಸಭೆಯಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬ ಇಬ್ಬರು ಯುವಕರು ಏಕಾಏಕಿ ಸದನದೊಳಗೆ ನುಗ್ಗಿ ಅಶ್ರುವಾಯು ಸಿಡಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಐವರನ್ನು ಬಂಧಿಸಲಾಗಿದೆ.

ಸಂಸತ್ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಪ್ರಕರಣದ ಕುರಿತಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಯತೀಂದ್ರ ಅವರನ್ನು ಚುನಾವಣಾ ಅಖಾಡಕ್ಕೆ ಇಳಿಸಲು ಯೋಜನೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಸಂಸತ್ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಪ್ರಕರಣದ ಕುರಿತು ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ (Lehar Sing Siroya), ಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ (Pratap Simmha) ವಿರುದ್ಧ ಸಿದ್ದರಾಮಯ್ಯ ಷಡ್ಯಂತರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡಲಾಗಿದ್ದು, ಮೈಸೂರಿನಲ್ಲಿ ಸಿದ್ದರಾಮಯ್ಯ ಮಗ ಲೋಕಸಭೆಗೆ ಸ್ಪರ್ಧೆ ಮಾಡಲಿರುವ ಹಿನ್ನೆಲೆ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಮಗನನ್ನು ಗೆಲ್ಲಿಸಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ದೆಹಲಿಯಲ್ಲಿ ಟಿವಿ9 ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ನಲ್ಲಿ ಗಲಾಟೆಯಾದ 15 ನಿಮಿಷದಲ್ಲೇ ಕಾಂಗ್ರೆಸ್ನವರು ಪ್ರತಿಭಟನೆ ನಡೆಸಿರುವುದನ್ನು ಗಮನಿಸಿದರೆ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

ಇದನ್ನು ಓದಿ: Post office Deposit Scheme: ಪೋಸ್ಟ್ ಆಫೀಸ್ ನಲ್ಲಿ ಬಂದಿದೆ ಭರ್ಜರಿ ಲಾಭ ತರುವ ಹೊಸ ಸ್ಕೀಮ್ – ಕೆಲವೇ ತಿಂಗಳಲ್ಲಿ ಕೈತುಂಬಾ ದುಡ್ಡು ಗುರೂ.. ,ಹೂಡಿಕೆಗಾಗಿ ಮುಗಿಬಿದ್ದ ಜನ !!

Leave A Reply

Your email address will not be published.