CM Siddaramaiah: ಭಾರತ ಹಿಂದೂ ರಾಷ್ಟ್ರ ಅಲ್ಲ, ಹಿಂದೂ ರಾಷ್ಟ್ರವಾಗಲು ಬಿಡುವುದೂ ಇಲ್ಲ !! ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ !!
M Siddaramaiah: ಭಾರತ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ಆದರೆ ನಾವು ಕೇವಲ ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ. ಅದು ಸಾಧ್ಯವೂ ಇಲ್ಲ. ಈ ದೇಶ ಹಿಂದು ನಮ್ಮ ದೇಶ ಹಿಂದುಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ದೇಶದ ಸಂಪತ್ತನ್ನು ಮುಸ್ಲಿಂರಿಗೂ ಹಂಚುತ್ತೇನೆ, ಅವರಿಗೆ 10,000 ಕೋಟೆಯಷ್ಟು ಅನುದಾನ ನೀಡುತ್ತೇನೆ ಎಂದು ಚರ್ಚೆಗೆ ಗ್ರಾಸವಾಗಿದ್ದು ಸಿಎಂ ಸಿದ್ದರಾಮಯ್ಯನವರು ಇದೀಗ ಮತ್ತೊಂದು ವಿವಾದವನ್ನು ಮೈಮೇಲೆಳೆದುಕೊಂಡಿದ್ದು, ನಮ್ಮ ದೇಶ ಕೇವಲ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ. ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತವಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಂದಹಾಗೆ ನಿನ್ನೆ ಗದಗದ(Gadag)ಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಅಯೋಧ್ಯೆಯಲ್ಲಿನ ರಾಮಮಂದಿರ ಉಳಿಯಬೇಕೆಂದರೆ ಭಾರತ ಹಿಂದೂ ರಾಷ್ಟ್ರ ಆಗಬೇಕೆಂಬ ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಈ ದೇಶ ಹಿಂದು ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ನಮ್ಮ ದೇಶ ಹಿಂದುಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ. ಎಬಿವಿಪಿ, ಭಜರಂಗದಳ ಇವೆಲ್ಲಾ ಬಿಜೆಪಿಯ ಅಂಗಸಂಸ್ಥೆಗಳು. ಸುಳ್ಳು ಹೇಳುವುದೇ ಇವರ ಕೆಲಸ. ಬಿಜೆಪಿ ಎಂದರೆ ಸುಳ್ಳಿನ ಕಾರ್ಖಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ: Covid 19: ಕೋವಿಡ್ ಗೆ ಮೊದಲ ಬಲಿ – ರಾಜ್ಯದ ಈ ಭಾಗಗಳಲ್ಲಿ ಕಟ್ಟೆಚ್ಚರ !! ಆರೋಗ್ಯ ಇಲಾಖೆ ಘೋಷಣೆ