Covid 19: ಕೋವಿಡ್ ಗೆ ಮೊದಲ ಬಲಿ – ರಾಜ್ಯದ ಈ ಭಾಗಗಳಲ್ಲಿ ಕಟ್ಟೆಚ್ಚರ !! ಆರೋಗ್ಯ ಇಲಾಖೆ ಘೋಷಣೆ

Covid 19: ಕರ್ನಾಟಕ ರಾಜ್ಯದ ನೆರೆಯ ಕೇರಳದಲ್ಲಿ ಮತ್ತೆ ಕೋವಿಡ್ (Covid 19) ಹೆಚ್ಚುತ್ತಿದ್ದು, JN.1 ಕೋವಿಡ್‌ ಹೊಸ ಉಪತಳಿಯೂ ಪತ್ತೆಯಾಗಿದೆ. ಅದರಲ್ಲೂ, ಗಡಿ ಜಿಲ್ಲೆಗಳಾದ ಮಂಗಳೂರು, ಮೈಸೂರು, ಚಾಮರಾಜನಗರದಲ್ಲಿ ಜನರಿಗೆ ಆತಂಕಕ್ಕೆ ಕಾರಣವಾಗಿದೆ.

JN.1 ಕೋವಿಡ್‌ ಹೊಸ ಉಪತಳಿ ಕೇರಳದಲ್ಲಿ ಪತ್ತೆಯಾಗಿದ್ದು, ದೇಶದಲ್ಲಿ‌ ಶೇಕಡಾ 90ಕ್ಕಿಂತ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ಕೇರಳ ರಾಜ್ಯದಲ್ಲೇ ಪತ್ತೆಯಾಗಿದೆ. ಈ ರಾಜ್ಯದ 18 ಹೆಚ್ಚು ಗಡಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿದೆ. ಉಳ್ಳಾಲ ತಾಲೂಕಿನ ತಲಪಾಡಿ ಮುಖ್ಯ ಗಡಿಯಾಗಿದ್ದು, ಸುಳ್ಯ, ಬಂಟ್ವಾಳ ತಾಲೂಕಿನಲ್ಲಿ ಸಾಕಷ್ಟು ಗಡಿ ಪ್ರದೇಶಗಳು ಇವೆ. ಈ ಗಡಿ ಪ್ರದೇಶದಿಂದ ಕೇರಳಲ್ಲಿರುವ ಸೋಂಕು ರಾಜ್ಯಕ್ಕೆ ಹರಡು ಸಾಧ್ಯತೆ ಇದೆ. ವಿವಿಧ ಕೆಲಸ ಕಾರ್ಯಗಳಿಗೆ ಮಾತ್ರವಲ್ಲದೆ ವಿವಿಧ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕೇರಳದಿಂದ ಜನರ ಜಿಲ್ಲೆಗೆ ಬಂದು ಹೋಗುತ್ತಿದ್ದಾರೆ. ಹೀಗಿದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ.

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ, ಕೊವೀಡ್ ತುರ್ತು ಪರಿಸ್ಥಿತಿ ನಿಭಾಯಿಸಲು ಇಲಾಖೆಯು ವ್ಯವಸ್ಥೆ ಮಾಡಿಕೊಂಡಿದೆ.

ಆರೋಗ್ಯ ಸೌಲಭ್ಯಗಳ ಲಭ್ಯತೆ, ಹಾಸಿಗೆಗಳ ಸಾಮರ್ಥ್ಯ, ವೈದ್ಯರು, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮಾನವ ಸಂಪನ್ಮೂಲಗಳ ಲಭ್ಯತೆ ದೊರಕಿಸುವ ಪ್ರಯತ್ನ ಮಾಡಲಾಗುತ್ತಿದ್ದು,
ತಾಂತ್ರಿಕ ಮತ್ತು ಅಕ್ಸಿಜನ್ ಬೆಂಬಲ ಸೌಲಭ್ಯಗಳೊಂದಿಗೆ ಆಂಬ್ಯುಲೆನ್ಸ್ ಸೇವೆ ಕೂಡಾ ಕಲ್ಪಿಸಬೇಕಾಗಿದೆ.
ಜೊತೆಗೆ ಕೋವಿಡ್‌ ಉಪಕರಣಗಳು, ಸಿಬ್ಬಂದಿ ಹಾಗೂ ವ್ಯವಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ.

ಇದನ್ನು ಓದಿ: Parliment attack : ಲೋಕಸಭಾ ಭದ್ರತಾ ಲೋಪ ಪ್ರಕರಣಕ್ಕೆ ರೋಚಕ ಟ್ವಿಸ್ಟ್!!

ಇನ್ನು ಮೈಸೂರು ಜಿಲ್ಲಾಧಿಕಾರಿ ಸಭೆ ಬಳಿಕ ಹೆಚ್​ಡಿ ಕೋಟೆ ತಾಲೂಕಿನ ಬಾವಲಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವ ಸಾಧ್ಯತೆ ಇದೆ. ಗಡಿಯಲ್ಲಿ ಈಗಾಗಲೇ ಆರೋಗ್ಯ ಇಲಾಖೆಯಿಂದ ಶೆಡ್ ನಿರ್ಮಾಣವಾಗಿದ್ದು, ಒಂದೆರೆಡು ದಿನಗಳಲ್ಲಿ ಕೊರೋನಾ ತಪಾಸಣೆ ಆರಂಭಿಸುವ ಸಾಧ್ಯತೆ ಇದೆ.

Leave A Reply

Your email address will not be published.