JDS-BJP ಸೀಟು ಹಂಚಿಕೆ ಫೈನಲ್- ಜೆಡಿಎಸ್’ಗೆ ಮೂರಲ್ಲ ಈ 4 ಕ್ಷೇತ್ರಗಳು ಫಿಕ್ಸ್ !!

JDS-BJP : ಲೋಕಸಭಾ ಚುನಾವಣೆ ನಿಮಿತ್ತ ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿ ವಿಚಾರ ಎಲ್ಲರಿಗೂ ತಿಳಿದಿದೆ. ಈ ಹಿನ್ನೆಲೆಯಲ್ಲಿ ದಳಪತಿಗಳು ನೆನ್ನೆ ದಿನ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಸಮಯದಲ್ಲಿ ಸೀಟ್ ಹಂಚಿಕೆಯ ಬಗ್ಗೆಯೂ ಮಾತುಕತೆ ನಡೆದಿದ್ದು ಜೆಡಿಎಸ್ ಗೆ ಈ 4 ಕ್ಷೇತ್ರಗಳು ಬಹುತೇಕ ಫಿಕ್ಸ್ ಎನ್ನಲಾಗಿದೆ.

ಹೌದು, ನಿನ್ನೆ ದಿನ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ(H D Devegowda), ಮಾಜಿ ಸಿಎಂ ಕುಮಾರಸ್ವಾಮಿ(H D kumarswamy)ಹಾಗೂ ರೇವಣ್ಣ(HD Revanna) ಅವರು ಇತರ ವರಿಷ್ಠರ ಜೊತೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಮಾಡಿದ್ದಾರೆ. ಮೈತ್ರಿ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿದ್ದು ಮೂಲಗಳ ಪ್ರಕಾರ ಬಿಜೆಪಿ 24 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, 4 ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗಿದೆ.

ಅಂದಹಾಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಬಹುತೇಕ ಫಿಕ್ಸ್ ಎನ್ನಲಾಗಿದೆ. ಮೈಸೂರು ಅಥವಾ ತುಮಕೂರು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಆಯ್ಕೆ ಮಾಡುವಂತೆ ಬಿಜೆಪಿ ಹೈಕಮಾಂಡ್ ಜೆಡಿಎಸ್​ಗೆ ಸಲಹೆ ನೀಡಿದೆ ಎಂದು ಹೇಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ನಾವು ಕುಳಿತು ನಿರ್ಧರಿಸುತ್ತೇವೆ. ನಾನು ಮತ್ತು ನಿಖಿಲ್ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವದಿಲ್ಲ ಎಂದು ತಿಳಿಸಿದ್ದಾರೆ.

Leave A Reply

Your email address will not be published.