Grihalakshmi Scheme: ಸರ್ಕಾರದ ಗೃಹಲಕ್ಷ್ಮೀ ಯೋಜನೆ ದುಡ್ಡು ಪಡೆಯುವ ಎಲ್ಲಾ ಮಹಿಳೆರಿಗೂ ಮುಖ್ಯ ಮಾಹಿತಿ- ಡಿ.27 ರಂದು ತಪ್ಪದೆ ನೀವಿಲ್ಲಿಗೆ ಬರಬೇಕು !!

Gruhalakshmi Scheme: ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ, ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (Gruhalakshmi Scheme) 19-07-2023 ರಂದು ಚಾಲನೆ ನೀಡಿದ್ದು, ಈ ಯೋಜನೆ ಅಡಿ ಮಹಿಳಾ ಕುಟುಂಬ ಮುಖ್ಯಸ್ಥರು ನೋಂದಣಿ ಮಾಡಿಕೊಂಡಿದ್ದು, ಪ್ರತಿ ತಿಂಗಳು ಅವರುಗಳ ಬ್ಯಾಂಕ್ ಖಾತೆಗೆ ರೂ.2,000/-ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುತ್ತಿದೆ.

 

ಆದರೆ ಈ ನೋಂದಣಿ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ.

 

ಸದ್ಯ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಅದರಂತೆ ದಿನಾಂಕ 27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಈ ಕೆಳಕಂಡಂತ ಸೂಚನೆಗಳನ್ನು ನೀಡಲಾಗಿದೆ.

ಇದನ್ನು ಓದಿ: Paid Menstrual Leave: ‘ಯಾವ ಸಲಿಂಗಕಾಮಿಗೆ ಋತುಚಕ್ರವಿದೆ?’ LGBT ಸಮುದಾಯದ ಕುರಿತು ಸ್ಮೃತಿ ಇರಾನಿ ಪ್ರಶ್ನೆ!!

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.

ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.

ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ದಿನಾಂಕ 22.12.2023 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.

ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನಾಂಕ 27.12.2023 ರಿಂದ 29.12.2023 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.

ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.

ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು.

ಅದಲ್ಲದೆ ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು:

ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.

ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.

ಇ-ಕೆವೈಸಿ ಅಪ್‌ಡೇಟ್ ಮಾಡುವುದು.

ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.

Leave A Reply

Your email address will not be published.