Hijab: ಹಿಜಾಬ್‌ ವಿಚಾರ ಸಂಬಂಧ; ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸ!!!

Hijab Raw: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಜಾಬ್‌ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್‌ ಆದೇಶವನ್ನು ಹಿಂಪಡೆಯಲು ಹೇಳಿದ್ದೇನೆ, ಎಲ್ಲರೂ ಹಿಜಾಬ್‌ ಹಾಕಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ. ಇದೀಗ ಈ ಮಾತು ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿದೆ. ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದಾರೆ. ಆದರೆ ಇನ್ನೊಂದು ಕಡೆ ಹಿಜಾಬ್‌ ನಿಷೇಧದಿಂದ ಕಾಲೇಜು ಬಿಟ್ಟಿದ್ದ ವಿದ್ಯಾರ್ಥಿನಿಯರು ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೂ ಸಿಎಂ ಅವರಿಗೆ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

 

ಹಿಜಾಬ್‌ ನಿಷೇಧ ಹೇರುತ್ತಿದ್ದಂತೆ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಹೋಗುವುದನ್ನು ನಿಲ್ಲಿಸಿದ್ದರು. ಇದೀಗ ಸಿಎಂ ಅವರ ನಿರ್ಧಾರದಿಂದ ಮುಸ್ಲಿಂ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸ ಮೂಡಿದೆ.

ನನ್ನ ಓದು ಅರ್ಧಕ್ಕೆ ನಿಂತಿತ್ತು. ಹಿಹಾಬ್‌ ವಾಪಸ್‌ ತೆಗೆದುಕೊಂಡಿದ್ದಕ್ಕೆ ತುಂಬಾ ಖುಷಿ ಆಯಿತು. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಹಾಗೂ ಜಮೀರ್‌ ಅಹ್ಮದ್‌ ಅವರಿಗೆ ಧನ್ಯವಾದ, ನನ್ನ ಓದನ್ನು ಮುಂದುವರೆಸುವೆ ಎಂದು ಟಿವಿ9 ಮಾಧ್ಯಮಕ್ಕೆ ಮಾತನಾಡಿದ ವಿದ್ಯಾರ್ಥಿನಿ ಹೇಳಿದ್ದಾರೆ.

ಇದನ್ನು ಓದಿ: Hijab Row: ಹಿಜಾಬ್ ಕುರಿತು ಸರ್ಕಾರದ ಹೊಸ ಆದೇಶ- ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ ಚಕ್ರವರ್ತಿ ಸೂಲಿಬೆಲೆ

Leave A Reply

Your email address will not be published.