Dakshina Kannada: ಆಳ್ವಾಸ್‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!!!

Share the Article

Mangaluru: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ನೇಣಿಗೆ ಶರಣಾಗಿರುವ ಕುರಿತು ವರದಿಯಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್‌ (18) ನೇಣಿಗೆ ಶರಣಾದ ವಿದ್ಯಾರ್ಥಿ. ಮನೋಜ್‌ ಹಾಸ್ಟೆಲ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿ ತುರ್ಚಿಹಾಳ ಗ್ರಾಮದವನಾಗಿದ್ದಾನೆ ವಿದ್ಯಾರ್ಥಿ. ತಾವು ಬರುವವರೆಗೆ ಶವ ಸ್ಥಳಾಂತರ ಮಾಡದಂತೆ ಪೋಷಕರು ಆಗ್ರಹ ಪಡಿಸಿದ್ದಾರೆ. ತಮ್ಮ ಮಗನ ಸಾವಿನ ಬಗ್ಗೆ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕುರಿತು ಮೂಡಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply