Shivanand Patil : ರೈತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್ !!

Shivanand Patil : ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ(Shivanand Patil) ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದರಿಂದ ಮತ್ತೊಮ್ಮೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 

 

ಬೆಳಗಾವಿ(Belagavi)ಜಿಲ್ಲೆ ಅಥಣಿ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಶಿವಾನಂದ ಪಾಟೀಲರು ಸಾಲಮನ್ನಾ ಆಗುವ ಆಸೆಗೆ ಪದೇ ಪದೇ ಬರಗಾಲ ಬರಲಿ ಎಂದು ರೈತರು(Farmers)ಬಯಸುತ್ತಾರೆ. ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿದ್ದು, ಆದರೆ, ಸರ್ಕಾರ ಸಂಕಷ್ಟದಲ್ಲಿರುವ ಸಂದರ್ಭ ಅದು ಕಷ್ಟವೇ ಸರಿ!!. ಸರ್ಕಾರ ಸದಾ ಬೆಂಬಲವಾಗಿ ನೆರವು ನೀಡಲಾಗದು ಎಂದು ಸಚಿವರು ಹೇಳಿದ್ದಾರೆ.

ಕೃಷ್ಣಾನದಿ ನೀರು ಪುಕ್ಸಟ್ಟೆ, ಅದೇ ರೀತಿ ಕರೆಂಟ್ ಕೂಡ ಪುಕ್ಸಟ್ಟೆ ಸಿಗುತ್ತಿದೆ. ಮುಖ್ಯಮಂತ್ರಿಗಳು ಬಿತ್ತನೆ ಬೀಜ, ಗೊಬ್ಬರದ ವ್ಯವಸ್ಥೆ ಕಲ್ಪಿಸಿದ್ದಾರೆ. ಬರಗಾಲ ಬಂದರೆ ರೈತರು ಸಾಲ ಮನ್ನಾ ಆಗುವ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ . ರೈತರ ಆಸೆ ಒಂದೆ ಆಗಿದ್ದು, ಮತ್ತೆ ಮತ್ತೆ ಬರಗಾಲ ಬರಲಿ ಎಂದು ರೈತರು ಬಯಸುತ್ತಾರೆ.ಆಗ ನಮ್ಮ ಸಾಲ ಮನ್ನಾ ಆಗಲಿದೆ ಎಂದು ರೈತರು ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಶಿವಾನಂದ ಅವರು ಹೇಳಿಕೆ ನೀಡಿದ್ದು, ಬಿಜೆಪಿ ಸೇರಿ ಪ್ರತಿಪಕ್ಷ, ರೈತ ಸಂಘಟನೆಗಳು ಸಚಿವ ಶಿವಾನಂದ ಪಾಟೀಲ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ರಾಜೀನಾಮೆಗೆ ಆಗ್ರಹಿಸಿವೆ.

ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳು ತಮ್ಮ ವಿರುದ್ಧ ಗರಂ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಶಿವಾನಂದ್ ಪಾಟೀಲ್ ಸಮರ್ಥನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ಸಂಪೂರ್ಣವಾಗಿ ತಿರುಚಲಾಗಿದೆ. ನಾನು ಎಂದಿಗೂ ರೈತ ವಿರೋಧಿಯಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಲು ನನ್ನ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

Leave A Reply

Your email address will not be published.