Madhu Bangarappa: ರಾಜ್ಯದಲ್ಲಿ 3ಸಾವಿರ KPS ಶಾಲೆಗಳ ಸ್ಥಾಪನೆ ಕುರಿತು ಶಿಕ್ಷಣ ಸಚಿವರು ಕೊಟ್ರು ಬಿಗ್ ಅಪ್ಡೇಟ್!!

Madhu Bangarappa : ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ(Madhu Bangarappa)ಸಿಹಿ ಸುದ್ದಿಯೊಂದನ್ನೂ ನೀಡಿದ್ದು, ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೆಪಿಎಸ್ ಶಾಲೆಗಳ ಸ್ಥಾಪನೆ ಮಾಡಲಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ.

 

 

ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಉದ್ದೇಶದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಅನುದಾನಿತ ಶಾಲೆಗಳು ಸಹ ಸರ್ಕಾರದ ಅಂಗವಾಗಿದ್ದು, 2020 ರವರೆಗೆ ಖಾಲಿ ಇರುವ ಶಿಕ್ಷಕರನ್ನು ತುಂಬಲು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. ಹಂತ ಹಂತವಾಗಿ ಶಿಕ್ಷಕರ ಹುದ್ದೆಗಳನ್ನು (Teachers Recruitment)ಭರ್ತಿ ಮಾಡುವುದು ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವನ್ನು ಮಧು ಬಂಗಾರಪ್ಪ ವ್ಯಕ್ತಪಡಿಸಿದ್ದಾರೆ.

 

53 ಸಾವಿರ ಶಿಕ್ಷಕರ ಕೊರತೆಯಿದ್ದು, ಇದರಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. 4 ರಿಂದ 5 ಸಾವಿರ ದೈಹಿಕ ಶಿಕ್ಷಕರ ಕೊರತೆಯಿದೆ. ದೈಹಿಕ ಶಿಕ್ಷಕರು, ಕಲೆ, ಸಂಗೀತ ಶಿಕ್ಷರರಕೊರತೆಯನ್ನು ಹಂತ ಹಂತವಾಗಿ ಪರಿಹರಿಸಲಾಗುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಮುಂಬರುವ 3 ವರ್ಷಗಳಲ್ಲಿ ರಾಜ್ಯದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು. ಎಲ್ ಕೆ.ಜಿ ಯಿಂದ ಹಿಡಿದು 2 ನೇ ಪಿಯುಸಿ ವರೆಗೆ ಕಲೆ, ಸಂಗೀತ, ಕ್ರೀಡೆ ಇತರೆ ಚಟುವಟಿಕೆಗಳನ್ನೊಳಗೊಂಡ ಗುಣಮಟ್ಟದ ಶಿಕ್ಷಣ ಸಿಗಲಿದೆ. ಮುಂದಿನ ವರ್ಷ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುತ್ತದೆ

Leave A Reply

Your email address will not be published.