Madhu Bangarappa: ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ!!!

Share the Article

Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಅವರ ಕಾರಿಗೆ ಲಾರಿ ಡಿಕ್ಕಿಯಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸಚಿವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪ ಅವರ ಕಾರಿಗೆ ಲಾರಿಯ ಮುಂಭಾಗ ತಾಗಿದೆ. ಕಾರಿನಲ್ಲಿದ್ದ ಸಚಿವರು ಸೇರಿ ಮೂವರಿಗೆ ಯಾವುದೇ ಹಾನಿಯಾಗಿಲ್ಲ. ಕಾರಿನ ಮುಂಭಾಗ ಜಖಂ ಆಗಿದೆ. ಅಪಘಾತದ ನಂತರ ಸಚಿವ ಮಧು ಬಂಗಾರಪ್ಪ ಅವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದಾರೆ.

ಇದನ್ನು ಓದಿ: ಕಾಣಿಯೂರು : ರಿಕ್ಷಾ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Madhu Bangarappa

Leave A Reply