Congress Poltics: ಪ್ರಧಾನಿ ಹುದ್ದೆಗೆ ಅಚ್ಚರಿಯ ವ್ಯಕ್ತಿಯ ಹೆಸರು ಸೂಚಿಸಿದ ಸಿಎಂ ಸಿದ್ದರಾಮಯ್ಯ: ಶಾಕ್ ಆದ ಕಾಂಗ್ರೆಸ್ ಕಾರ್ಯಕರ್ತರು!!

 

Congress Politics : INDIA ಮೈತ್ರಿಕೂಟದಿಂದ (INDIA Bloc) ಪ್ರಧಾನಿ ಅಭ್ಯರ್ಥಿ (Prime Minister Candidate)ಯಾರಾಗಬೇಕು ಎಂಬುದರ ಕುರಿತ ಚರ್ಚೆ ನಡೆದ ಸಂದರ್ಭ ಬಹುತೇಕ ಮಂದಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಪರ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಈ ನಡುವೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಾತ್ರ ಖರ್ಗೆ ಬದಲಿಗೆ ಮತ್ತೊಬ್ಬ ವ್ಯಕ್ತಿಯ ಹೆಸರನ್ನು ಹೇಳಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ.

 

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದ್ದರು. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವೇ ಹೊರತು ಅದಕ್ಕೆ ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಹೊಂದಿದೆ.

 

ಈ ದೇಶದಲ್ಲಿ ಭಾರತ್ ಜೋಡೋ ಯಾತ್ರೆ ಬೇರೆ ಯಾರು ಮಾಡಿರಲಿಲ್ಲ. ರಾಹುಲ್ ಗಾಂಧಿ ಅವರು ಈಗ ಭಾರತ್ ಜೋಡೋ 2 ಪ್ರಾರಂಭ ಮಾಡುತ್ತಿದ್ದಾರೆ. ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡುತ್ತಿದ್ದಾರೆ. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave A Reply

Your email address will not be published.