Pratap Simha: ಸಂಸದ ಪ್ರತಾಪ್ ಸಿಂಹ ಅವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ: ಕೈ ತಪ್ಪಲಿದೆಯೇ ಮೈಸೂರು ಲೋಕ ಸಭಾ ಟಿಕೇಟ್?!

 

Pratap Simha: ಮೈಸೂರು ಸಂಸದ ಪ್ರತಾಪ್ ಸಿಂಹ(MP Pratap Simha) ಅವರಿಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸಂಸತ್ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಪ್ರಕರಣದಲ್ಲಿ ಪ್ರತಾಪ್ ಸಿಂಹ(MP Pratap Simha )ಅವರು ನೇರ ಹೊಣೆ ಎಂದು ಆರೋಪಿಸಿ ಕಾಂಗ್ರೆಸ್ (Congress)ಇತ್ತೀಚಿಗೆ ಪ್ರತಿಭಟನೆ ನಡೆಸಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ(Siddarmayya)ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ವಿರುದ್ದ ಎಫ್ ಐ ಆರ್ (FIR)ದಾಖಲಾಗಿದೆ. ಇದೆಲ್ಲದರ ನಡುವೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಸಂಸದ ಪ್ರತಾಪ್ ಸಿಂಹ(MP Pratap Simha) ಸಿದ್ಧರಾಮಯ್ಯ(Siddaramaiah) ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ ತನ್ನತ್ತ ಸೆಳೆದುಕೊಳ್ಳಲು ಹರಸಾಹಸ ಪಡುತ್ತಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರ ಮಾತುಕತೆಯಲ್ಲಿರುವಾಗಲೇ ಮೈಸೂರು ಕ್ಷೇತ್ರಕ್ಕೆ ಜೆಡಿಎಸ್‌ ಡಿಮ್ಯಾಂಡ್ ಮಾಡಿದೆ ಎನ್ನಲಾಗಿದೆ.

ಪ್ರತಾಪ್ ಸಿಂಹ ಈಗಾಗಲೇ ಎರಡು ಬಾರಿ ಮೈಸೂರು ಸಂಸದರಾಗಿದ್ದಾರೆ. ಆದರೆ ಈ ಬಾರಿ ಸಂಸತ್ ಭದ್ರತಾ ಲೋಪ ಪ್ರಕರಣ ಘಟನೆಯ ಬಳಿಕ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ತಪ್ಪುವುದೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರನ್ನೂ ಕಾಡುತ್ತಿದೆ. ಈ ಮಧ್ಯೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂದರ್ಭ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.ಹೀಗಾಗಿ, ಹೈಕಮಾಂಡ್ ನಿಲುವೇನು ಎಂಬುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನು ಓದಿ: Jennifer Lopez: ಅರೇರೇ ಎಂತಾ ಕಾಲ ಬಂತಪ್ಪ?? ಜೆನ್ನಿಫರ್ ಲೋಪೆಜ್‌ಗೆ ವಜ್ರ ಖಚಿತ ಟಾಯ್ಲೆಟ್ ಗಿಫ್ಟ್ ಕೊಟ್ಟ ಪತಿ: ಇದರ ಮೌಲ್ಯ ಕೇಳಿದರೆ ಹುಬ್ಬೇರಿಸೋದು ಪಕ್ಕಾ!!

Leave A Reply

Your email address will not be published.