Ram Gopal Verma: ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ!!!

‘ವ್ಯೂಹಂ’ ಸಿನಿಮಾದ ಮೂಲಕ ವಿವಾದ ಎದುರಿಸುತ್ತಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಾಮಾಜಿಕ ಕಾರ್ಯಕರ್ತ ಕೋಳಿಪುಡಿ ಶ್ರೀನಿವಾಸ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ರಾಮ್ ಗೋಪಾಲ್ ವರ್ಮಾ ಅವರ ತಲೆಗೆ ಕೋಲಿಕಪುಡಿ ಶ್ರೀನಿವಾಸ್ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮಾ ಅವರ ತಲೆ ಕಡಿದ ವ್ಯಕ್ತಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

 

ಘಟನೆ ವಿವರ: ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಅವರ ವ್ಯೂಹಂ ಸಿನಿಮಾ ರಿಲೀಸ್‌ ಮಾಡದಂತೆ ಟಿಡಿಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಮಾಧ್ಯಮವೊಂದರಲ್ಲಿ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿರುವ ಟಿಡಿಪಿ ಮುಖಂಡ ಕೋಲಿಕಪುಡಿ ಶ್ರೀನಿವಾಸ್‌ ನಾಯ್ಡು ಹೇಳಿಕೆಯೊಂದನ್ನು ನೀಡಿದ್ದಾರೆ. ವರ್ಮಾ ತಲೆ ಕಡಿದು ತಂದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು.

 

ಟಿಡಿಪಿ ಕಾರ್ಯಕರ್ತರು ಮತ್ತು ಎನ್‌ಟಿಆರ್‌ ಅಭಿಮಾನಿಗಳು ರಾಮ್‌ಗೋಪಾಲ್‌ ವರ್ಮಾ ಕಚೇರಿಗೆ ಮುತ್ತಿಗೆ ಕೂಡಾ ಹಾಕಿದ್ದರು. ಅಲ್ಲಿ ವ್ಯೂಹಂ ಸಿನಿಮಾದ ಪೋಸ್ಟ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನು ಓದಿ: Donkey Route: ಡಾಂಕಿ ರೂಟ್‌ ಹಿಡಿದು ಅಮೆರಿಕನ್‌ ಫ್ಲೈಟ್‌ ಹಿಡಿದ 96,917 ಭಾರತೀಯರು; ಅಮೆರಿಕದಲ್ಲಿ ಅರೆಸ್ಟ್‌!!!

ವ್ಯೂಹಂ ಸಿನಿಮಾಗೆ ಆಂಧ್ರದ ಟಿಡಿಪಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಒತ್ತಡ ಹಾಕಿದ್ದಾರೆ. ಆಂಧ್ರಪ್ರದೇಶ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವುದರಿಂದ ಈ ಹೊತ್ತಿನಲ್ಲಿ ವ್ಯೂಹಂ ಸಿನಿಮಾ ರಿಲೀಸ್‌ ಆಗುತ್ತಿದೆ. ಇದು ಆಂಧ್ರದ ಸಿಎಂ ಜಗನ್‌ ಮೋಹನ್‌ ರೆಡ್ಡಿ ಜೀವನವನ್ನು ಆಧರಿಸಿದ ಸಿನಿಮಾವಾಗಿದ್ದು, ಚಂದ್ರಬಾಬು ನಾಯ್ಡು ಅವರನ್ನು ವಿಲನ್‌ ರೀತಿಯಲ್ಲಿ ಬಿಂಬಿಸಲಾಗಿದೆ ಎನ್ನುವುದು ಟಿಡಿಪಿ ಸದಸ್ಯರ ಆರೋಪ. ಈ ಕಾರಣದಿಂದ ಚಿತ್ರಕ್ಕೆ ವಿರೋಧವನ್ನು ವ್ಯಕ್ತಪಡಿಸಲಾಗಿದೆ.

 

ಅಲ್ಲದೇ ಈ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು ಜೈಲಿಗೆ ಹೋದ ತುಣಕನ್ನೂ ಸೇರಿಸಲಾಗಿದೆಯಂತೆ. ಇವೆಲ್ಲ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂಬ ಕಾರಣದಿಂದ ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್‌, ಕೇಂದ್ರ ಸೆನ್ಸಾರ್‌ ಮಂಡಳಿಗೆ ಪತ್ರ ಬರೆದು, ಈ ಚಿತ್ರವನ್ನು ಸೆನ್ಸಾರ್‌ ಮಾಡಬಾರದು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

 

ರಾಮ್ ಗೋಪಾಲ್ ವರ್ಮಾ ಅವರು ಡಿಸೆಂಬರ್ 26 ಮಂಗಳವಾರದಂದು ಈ ಸಂಬಂಧ ಆನ್‌ಲೈನ್ ದೂರು ದಾಖಲಿಸಿದ್ದಾರೆ. ಇದಾದ ಬಳಿಕ ಡಿ.27ರಂದು ವಿಜಯವಾಡದಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿ ಕೋಳಿಪುಡಿ ಶ್ರೀನಿವಾಸ್ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದರು. ರಾಮ್ ಗೋಪಾಲ್ ವರ್ಮಾ ಅವರು ಕೋಳಿಕಪುಡಿ ಶ್ರೀನಿವಾಸ್ ವಿರುದ್ಧ ಪೊಲೀಸ್ ದೂರು ನೀಡುತ್ತಿರುವುದಾಗಿ ಬರೆದಿದ್ದಾರೆ. ಟ್ವೀಟ್‌ನಲ್ಲಿ ಈ ಕುರಿತು ಆಂಧ್ರ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ ಮತ್ತು ಟಿವಿ5 ಆ್ಯಂಕರ್ ಸಾಂಬಶಿವ ರಾವ್ ಮತ್ತು ಮಾಲೀಕ ಬಿಆರ್ ನಾಯ್ಡು ವಿರುದ್ಧವೂ ರಾಮ್ ಗೋಪಾಲ್ ವರ್ಮಾ ದೂರು ದಾಖಲಿಸಿದ್ದಾರೆ.

https://twitter.com/i/status/1739687223698878928

Leave A Reply

Your email address will not be published.