Teacher Misbehave: ಶೈಕ್ಷಣಿಕ ಪ್ರವಾಸದ ಸಂದರ್ಭ, ಮುಖ್ಯ ಶಿಕ್ಷಕಿಯಿಂದ ವಿದ್ಯಾರ್ಥಿ ಜೊತೆ ಅಸಭ್ಯ ವರ್ತನೆ; ಶಿಕ್ಷಣ ಇಲಾಖೆಯಿಂದ ಮುಖ್ಯ ಶಿಕ್ಷಕಿಯ ಅಮಾನತು!

Chintamani News: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯರೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದು, ಇದೀಗ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಪುಷ್ಪಲತಾ ಅವರು ಅಮಾನತುಗೊಳಗಾದವರು.

ಘಟನೆ ವಿವರ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಶಿಕ್ಷಕಿ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಮಾತ್ರವಲ್ಲದೇ, ಆತನೊಂದಿಗೆ ರೊಮ್ಯಾಂಟಿಕ್‌ ವೀಡಿಯೋ ಹಾಗೂ ಚಿತ್ರಗಳನ್ನು ಮಾಡಿ, ಸೆರೆ ಹಿಡಿದು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ಫೋಟೋಗಳು ಸೋರಿಕೆಯಾಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಬಾಲನೊಂದಿಗೆ ವಿವಿಧ ಭಂಗಿಗಳಲ್ಲಿ ಫೋಟೋ ತೆಗೆದಿದ್ದು, ತಾನೋರ್ವ ಶಿಕ್ಷಕಿ ಎಂಬುವುದನ್ನು ಮರೆತು ಈ ಕೆಲಸವನ್ನು ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಮಾಡಿದ್ದಾರೆ. ವಿದ್ಯಾರ್ಥಿ ಕೂಡಾ ಶಿಕ್ಷಕಿಯನ್ನು ಮುದ್ದಾಡಿದ್ದು, ಶಿಕ್ಷಕಿ ಬಾಲಕನಿಗೆ ಕಿಸ್‌ ಕೊಟ್ಟಿರುವ ಫೋಟೋಗಳು ಎಲ್ಲೆಡೆ ವೈರಲ್‌ ಆಗಿತ್ತು. ಅನಂತರ ವಿದ್ಯಾರ್ಥಿಯ ಪೋಷಕರು ಶಿಕ್ಷಕಿಯ ವರ್ತನೆಗೆ ಸಿಟ್ಟುಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದರು. ಮುಖ್ಯ ಶಿಕ್ಷಕಿಯ ಈ ವರ್ತನೆಯಿಂದ ಶಾಲೆ ಹಾಗೂ ಗ್ರಾಮದ ಮರ್ಯಾದೆ ಹೋಗಿದೆ, ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಶಿಕ್ಷಣ ಇಲಾಖೆಗೆ ಒತ್ತಾಯಿಸಿದ್ದರು.

ಅನಂತರ ಕ್ಷೇತ್ರ ಶಿಕ್ಷಣಾಧಿಕಾರಿ ವಿ ಉಮಾದೇವಿ ಅವರು ಬುಧವಾರ ಶಾಲೆಗೆ ಭೇಟಿ ನೀಡಿ ಸಂಬಂಧಪಟ್ಟವರಿಂದ ಮಾಹಿತಿ ಸಂಗ್ರಹಿಸಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ವರದಿ ಸಲ್ಲಿಸಲಾಗಿತ್ತು.

ಅಷ್ಟು ಮಾತ್ರವಲ್ಲದೇ ಮುಖ್ಯ ಶಿಕ್ಷಕಿ ಪುಷ್ಪಲತಾ ಅವರು ತಮ್ಮ ಸಮಜಾಯಿಷಿಯನ್ನು ಕೂಡಾ ನೀಡಿದ್ದು, ಶೈಕ್ಷಣಿಕ ಪ್ರವಾಸದ ಸಮಯದಲ್ಲಿ ತೋಟದಲ್ಲಿ ಮನರಂಜನೆಗಾಗಿ ಮಕ್ಕಳಿಂದ ಹಾಡು ಹೇಳಿಸಲಾಗುತ್ತಿತ್ತು. ನೃತ್ಯ ಮಾಡುವ ಸಮಯದಲ್ಲಿ ತೆಗೆದ ಫೋಟೋಗಳು ಅವು. ಕೆಟ್ಟ ಉದ್ದೇಶದಿಂದ ಆ ರೀತಿ ಮಕ್ಕಳಲ್ಲಿ ವರ್ತಿಸಿಲ್ಲ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಅನಂತರ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿರುವ ವರದಿಯನ್ನು ಆಧರಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದ ಶಿಕ್ಷಣ ಇಲಾಖೆ ಮುಖ್ಯಶಿಕ್ಷಕಿ ಪುಷ್ಪಲತಾ ಅವರನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ.

 

 

 

Leave A Reply

Your email address will not be published.