PUC Exam: ದ್ವಿತೀಯ ಪಿಯು ಪ್ರಿಪರೇಟರಿ, ಪ್ರಥಮ ಪಿಯು ವಾರ್ಷಿಕ ಪರೀಕ್ಷೆ Time table ಪ್ರಕಟ!!!

Puc Exams Time Table: ದ್ವಿತೀಯ ಪಿಯುಸಿ (Second Puc) ಪ್ರಿಪರೇಟರಿ ಮತ್ತು ಪ್ರಥಮ ಪಿಯುಸಿ (First Puc) ಅಂತಿಮ ಪರೀಕ್ಷೆಯ ವೇಳಾಪಟ್ಟಿ (Exam Time Table) ಪ್ರಕಟಗೊಂಡಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದು, 2024ರ ಫೆ.13ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ಜ.16 ರಿಂದ 30 ರ ನಡುವೆ ಜಿಲ್ಲಾಮಟ್ಟದಲ್ಲಿ ನಡೆಸಲು ಸೂಚಿಸಲಾಗಿದೆ.

ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿದೆ. 80 ಅಂಕಗಳ ಪರೀಕ್ಷೆ ನಡೆಯಲಿದ್ದು, 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನವಿರಲಿದೆ)

ಸೆಕೆಂಡ್ ಪಿಯು ಪ್ರಿಪರೇಟರಿ ಪರೀಕ್ಷೆ ಸೂಚನೆಗಳು
ಆಯಾ ಜಿಲ್ಲೆಗಳ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಜಿಲ್ಲಾ ಮಟ್ಟದಲ್ಲಿ ವೇಳಾ ಪಟ್ಟಿ ಸಿದ್ಧಪಡಿಸಿ ಪ್ರಿಪರೇಟರಿ ಪರೀಕ್ಷೆ ನಡೆಸುವುದು.
ಮಂಡಳಿಯ ನಿರ್ದೇಶನದಂತೆ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳಲ್ಲಿ 70 ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 80 ಅಂಕಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುವುದು.
ಈಗಾಗಲೇ ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವ ಮಾದರಿ ಪ್ರಶ್ನೆಪತ್ರಿಕೆಗಳು ಹಾಗೂ ನೀಲನಕ್ಷೆಗಳ ಆಧಾರದ ಮೇಲೆ ವಿಭಾಗ ಮಟ್ಟದಲ್ಲಿ ಪ್ರಶ್ನೆಪತ್ರಿಕಾ ತಯಾರಿಕಾ ತರಬೇತಿ ಹೊಂದಿದ ಉಪನ್ಯಾಸಕರನ್ನು ಬಳಸಿಕೊಂಡು ಸಿದ್ಧಪಡಿಸುವುದು.
ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯಕ್ಕನುಗುಣವಾಗಿ ಪಶ್ನೆಪತ್ರಿಕೆಗಳನ್ನು ವಿತರಿಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ:16-01-2024, 30-01-2024 ರವರೆಗೆ ನಡೆಸುವುದು.
ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಪರೀಕ್ಷಾ ಗೌಪ್ಯತೆಯೊಂದಿಗೆ ಪರೀಕ್ಷೆಯನ್ನು ನಡೆಸಲು ಕ್ರಮ ವಹಿಸುವುದು.

ಇದನ್ನು ಓದಿ: Ayodhya Airport: ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಕೊನೆಗೂ ನಡೆಯಿತು ನಾಮಕರಣ – ಆದ್ರೆ ಇಟ್ಟದ್ದು ರಾಮನ ಹೆಸರಲ್ಲ, ಮತ್ಯಾರದ್ದು ?

ತಾತ್ಕಾಲಿಕ ವೇಳಾಪಟ್ಟಿಯಂತೆ ಅಂತಿಮ ಪರೀಕ್ಷೆಯ ಪ್ರಮುಖ ದಿನಾಂಕ

 

 

Leave A Reply

Your email address will not be published.