Udupi News: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಅರ್ಜಿ ಕುರಿತು ಮಹತ್ವದ ಮಾಹಿತಿ!

Udupi: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಮಾಹಿತಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅರ್ಜಿ ತಿರಸ್ಕರಿಸಿದೆ. ಈ ಕುರಿತು ಶನಿವಾರ (ಇಂದು) ಆದೇಶ ನೀಡಿದೆ.

 

ಆರೋಪಿ ಪ್ರವೀಣ್‌ ಚೌಗುಲೆ ಅವರು ನ್ಯಾಯಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಡಿ.14 ರಂದು ವಕೀಲ ಕೆ.ಎಸ್‌.ಎನ್‌.ರಾಜೇಶ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದ. ಇದೀಗ ಈ ಅರ್ಜಿ ಕುರಿತು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.

ಇದರ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಧೀಶ ದಿನೇಶ್‌ ಹೆಗ್ಡೆ ಅವರು ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

Leave A Reply

Your email address will not be published.