Mangaluru: ಪಿಲಿಚಾಮುಂಡಿ ದೈವದ ಪವಾಡ; ದೈವಸ್ಥಾನದಲ್ಲಿ ಹುಲಿ ಹೆಜ್ಜೆ ಪತ್ತೆ!!!

Mangaluru News: ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಪೆರ್ಮುದೆಯ ಕಾಯಾರ್ ಕಟ್ಟೆಯಲ್ಲಿ ಇತ್ತೀಚೆಗೆ ಒರಿಸ್ಸಾದ ಮುಸ್ಲಿಂ ಯುವಕನ ಮೈ ಮೇಲೆ ಪಿಲಿಚಾಮುಂಡಿ ದೈವದ ಆವೇಶ (God spirit on Muslim Youth)ಬಂದ ಘಟನೆ ಬೆನ್ನಲ್ಲೇ ಇದೀಗ, ಮತ್ತೊಂದು ಅಚ್ಚರಿಯ ವಿದ್ಯಮಾನ ಬೆಳಕಿಗೆ ಬಂದಿದೆ. ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದ ನೇಮೋತ್ಸವಕ್ಕೆ ತಯಾರಿ ನಡೆಸುತ್ತಿದ್ದಾಗ ದೈವಸ್ಥಾನದಲ್ಲಿ ಹುಲಿ (ಪಿಲಿಚಾಮುಂಡಿ) ಹೆಜ್ಜೆ ಪತ್ತೆಯಾಗಿದೆ.

ಇದನ್ನು ಓದಿ: Real Estateನಲ್ಲಿ ಹೂಡಿಕೆ ಮಾಡೋದು ಬೆಸ್ಟ್? ಹಣ ಹೀಗೆ ಗಳಿಸಿ

ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುತ್ತಿದ್ದಾಗ ಒರಿಸ್ಸಾ ಮೂಲದ ಯುವಕನ ಮೈಮೇಲೆ ಪಿಲಿಚಾಮುಂಡಿ ಆವೇಶ ಬಂದು ಮುನಿಸನ್ನು ತೋರ್ಪಡಿಸಿತ್ತು. ಈ ಕುರಿತು ಪ್ರಶ್ನೆ ಇಟ್ಟಾಗ ಪಾಳುಬಿದ್ದ ದೈವಸ್ಥಾನ ಹಾಗೂ ನೇಮೋತ್ಸವ ಸ್ಥಗಿತಗೊಳಿಸಿದ ವಿಚಾರ ಮುನ್ನಲೆಗೆ ಬಂದಿದ್ದು, ಹೀಗಾಗಿ ಪೆರ್ಮುದೆಯ(Permude)ಕಾಯಾರ್ ಕಟ್ಟೆಯಲ್ಲಿ (Kayar Katte)18 ವರ್ಷಗಳ ಬಳಿಕ ದೈವದ ನೇಮೋತ್ಸವಕ್ಕೆ ಸಿದ್ದತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಪಾಳು ಬಿದ್ದಿದ್ದ ಪಿಲಿಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ.

ಪೆರ್ಮುದೆಯ ಪಿಲಿಚಾಮುಂಡಿ ದೈವಸ್ಥಾನದ ಕಾಮಗಾರಿ ಸಂದರ್ಭ ನಡೆದಿರುವ ಪವಾಡ ದೈವಾರಧಕರನ್ನು ಪುಳಕಗೊಳಿಸಿದೆ. ಪಿಲಿಚಾಮುಂಡಿ ದೈವದ ಜೊತೆಗೆ ನಂಟು ಹೊಂದಿರುವ ಹುಲಿಯ ಹೆಜ್ಜೆ ದೈವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಪತ್ತೆಯಾಗಿದೆ. ದೈವಸ್ಥಾನದ ಜಾಗದಲ್ಲಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಸ್ಥಳೀಯ ಯುವಕರು ಕೆಲಸ ಮಾಡುತ್ತಿದ್ದಾಗ ದೈವಸ್ಥಾನದ ಮೇಲೆ ಹಾಗೂ ಮಣ್ಣಿನಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ ಎನ್ನಲಾಗಿದೆ. ಹುಲಿ ಹೆಜ್ಜೆಯ ಪವಾಡ ನಡೆದಿದ್ದು, 18 ವರ್ಷಗಳಿಂದ ದೈವಾರಧನೆ ಸ್ಥಗಿತಗೊಂಡ ಜಾಗದಲ್ಲಿ ಪಿಲಿಚಾಮುಂಡಿ ದೈವ ತನ್ನ ಇರುವಿಕೆಯನ್ನು ಬಿಂಬಿಸುವ ಪ್ರಯತ್ನ ನಡೆಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Leave A Reply

Your email address will not be published.