Ration Card: ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಹೆಸರು ಹೀಗೆ ಸೇರಿಸಿ!!

Ration Card: ಪಡಿತರ ಚೀಟಿ(Ration Card)ಭಾರತ ಸರ್ಕಾರವು ತನ್ನ ನಾಗರಿಕರಿಗೆ ನೀಡುವ ಅತ್ಯಗತ್ಯ ಕಾನೂನು ದಾಖಲೆಯಾಗಿದೆ. ರಾಜ್ಯ ಕಾಂಗ್ರೆಸ್(Congress Government) ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಅತ್ಯವಶ್ಯಕ.

 

ನಿಮ್ಮಲ್ಲಿ ರೇಷನ್ ಕಾರ್ಡ್(Ration Card) ಇದ್ದು, ಆ ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಹೇಗೆ ಎಂಬ ಗೊಂದಲ ನಿಮ್ಮನ್ನು ಕಾಡುತ್ತಿದ್ದರೆ ಚಿಂತಿಸಬೇಕಾಗಿಲ್ಲ!!! ಈಗ ಆನ್‌ಲೈನ್‌ ಮೂಲಕ ರೇಷನ್ ಕಾರ್ಡ್‌ಗೆ ಹೊಸ ಸದಸ್ಯರ ಹೆಸರನ್ನು ಸೇರಿಸಬಹುದು.ಆಧಾರ್ ಕಾರ್ಡ್ ಅನ್ನು ನವೀಕರಿಸಿದ ಬಳಿಕ ಪರಿಷ್ಕೃತ ಆಧಾರ್ ಕಾರ್ಡ್‌ನ ಪ್ರತಿಯೊಂದಿಗೆ, ನೀವು ಹೆಸರು ಸೇರಿಸಲು ಆಹಾರ ಇಲಾಖೆ ಅಧಿಕಾರಿಗೆ ಅರ್ಜಿಯನ್ನು ಕಳುಹಿಸಬೇಕಾಗುತ್ತದೆ.

ರೇಷನ್ ಕಾರ್ಡ್‌ನಲ್ಲಿ ನಮೂದಿಸಿರುವ ಮಾಹಿತಿಯ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತದೆ. ನೀವು ಪಡಿತರ ಚೀಟಿಯಲ್ಲಿ ಕುಟುಂಬದ ಎಲ್ಲ ಸದಸ್ಯರ ಹೆಸರುಗಳನ್ನು ನಮೂದಿಸಬೇಕಾಗುತ್ತದೆ. ಯಾವುದೇ ಒಂದು ಕುಟುಂಬದಲ್ಲಿ ಹೊಸ ಸದಸ್ಯರು ಸೇರ್ಪಡೆಯಾದ ಸಂದರ್ಭ ಅವರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾಗುತ್ತದೆ. ಮಕ್ಕಳ ಮದುವೆಯ ಬಳಿಕ ಮನೆಗೆ ಬರುವ ಸೊಸೆಯ ಹೆಸರನ್ನು ಮೊದಲು ರೇಷನ್ ಕಾರ್ಡ್‌ನಲ್ಲಿ ಸೇರಿಸಬೇಕಾಗುತ್ತದೆ.

ಇದನ್ನು ಓದಿ: Land Purchase Rules: ರಾಜ್ಯದಲ್ಲಿ ಇನ್ನೂ ಹೊರ ರಾಜ್ಯದವರು ಭೂಮಿ ಖರೀದಿಸುವಂತಿಲ್ಲ : ಮುಖ್ಯಮಂತ್ರಿಯಿಂದ ಹೊಸ ಆದೇಶ!!

ಒಂದು ಮಗು ಜನಿಸಿದರೆ ಇಲ್ಲವೇ ದತ್ತು ಪಡೆದರೆ, ನಂತರ ಅವರ / ಅವಳ ಹೆಸರನ್ನು ಪಡಿತರ ಚೀಟಿಯಲ್ಲಿ ನೋಂದಾಯಿಸಲು, ಮೊದಲಿಗೆ ಅವರ ಆಧಾರ್ ಕಾರ್ಡ್ ಅನ್ನು ಮಾಡಿಸಬೇಕು. ಮದುವೆಯಾದ ಮೇಲೆ ಸೊಸೆ ಮನೆಗೆ ಬಂದಾಗ ಮೊದಲು ಅವರ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಿ ವಿಳಾಸವನ್ನು ಬದಲಾಯಿಸಬೇಕು. ಹೀಗಾಗಿ, ಹುಡುಗಿ ತನ್ನ ಆಧಾರ್ ಕಾರ್ಡ್‌ನಲ್ಲಿ ತಂದೆಯ ಹೆಸರಿನ ಬದಲಿಗೆ ತನ್ನ ಗಂಡನ ಹೆಸರನ್ನು ನಮೂದಿಸಬೇಕಾಗುತ್ತದೆ.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರನ್ನು ಸೇರಿಸಲು ಅಗತ್ಯ ದಾಖಲೆಗಳ ನೆರವಿನೊಂದಿಗೆ ನೀವು ಆನ್‌ಲೈನ್‌ ಮೂಲಕ ಸುಲಭವಾಗಿ ನಿಮ್ಮ ರೇಷನ್ ಕಾರ್ಡ್‌ನಲ್ಲಿ ಹೊಸ ಸದಸ್ಯರ ಹೆಸರನ್ನು ಸೇರಿಸಬಹುದು. ಪಡಿತರ ಚೀಟಿಯಲ್ಲಿ ಸೊಸೆ, ಮಗುವಿನ ಹೆಸರನ್ನು ಸೇರಿಸಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ಗೋವಾ, ಗುಜರಾತ್, ಅಸ್ಸಾಂನಲ್ಲಿ ಈ ಸೌಲಭ್ಯ ಲಭ್ಯವಿದೆ. ಮೇಘಾಲಯ, ತ್ರಿಪುರಾ, ಸಿಕ್ಕಿಂ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಿಜೋರಾಂ ಮತ್ತು ಮಣಿಪುರದಂತಹ ರಾಜ್ಯಗಳಲ್ಲಿ ಈ ಸೇವೆ ದೊರೆಯಲಿದೆ.

Leave A Reply

Your email address will not be published.