Drought Relief: ರೈತರಿಗೆ ಭರ್ಜರಿ ಗುಡ್ ನ್ಯೂಸ್: ರೈತರ ಖಾತೆಗೆ 2 ಸಾವಿರ ರೂಪಾಯಿ ಬರ ಪರಿಹಾರ ಜಮೆ!?
Drought Relief: ರಾಜ್ಯ ಸರ್ಕಾರ 2023ನೇ ಮುಂಗಾರು ಹಂಗಾಮಿನಲ್ಲಿ (Monsoon Season) ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ(Crop Loss)ಸಂಬಂಧಿಸಿದಂತೆ ರೈತರಿಗೆ(Farmers)ಬರ ಪರಿಹಾರ (Drought Relief) ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಎನ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಪರಿಹಾರ ಬಂದ ಬಳಿಕ ಹೆಕ್ಟೇರ್ ಪ್ರದೇಶಕ್ಕೆ ಅನುಗುಣವಾಗಿ ಪರಿಹಾರ ಬಿಡುಗಡೆ ಮಾಡುವ ಭರವಸೆ ನೀಡಿದೆ. ಈಗ ರಾಜ್ಯದ ವಂತಿಗೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಈ ಕುರಿತು ಒಟ್ಟು 105 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: Marcos Commandos: ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್, ಕಡಲ ಒಡಲಲ್ಲಿ ನಡೆಯಿತು ಮಹಾನ್ ಕಾರ್ಯಾಚರಣೆ !!
ಎಸ್‌ಡಿಆರ್‌ಎಫ್ (SDRF Fund) ಅಡಿಯಲ್ಲಿ ಬರ ಪರಿಹಾರವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು, ಎಕರೆಗೆ ಗರಿಷ್ಠ ಎರಡು ಸಾವಿರ ರೂಪಾಯಿಯಂತೆ ಅನುದಾನ ನೀಡುವುದಾಗಿ ಮಾಹಿತಿ ನೀಡಿದೆ. ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್‌ಗೆ 8,500 ರೂ., ನೀರಾವರಿ ಬೆಳೆಗೆ 17,000 ರೂ. ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ 22,500 ರೂ. ಪರಿಹಾರವನ್ನು ನಿಗದಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 105 ಕೋಟಿ ರೂಪಾಯಿಯನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿದೆ.ಪ್ರತಿ ರೈತರಿಗೆ ಗರಿಷ್ಠ 2000ರವರೆಗೆ ರೈತರಿಗೆ ಪಾವತಿಸಲು 2023-24ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.