Anna Bhagya scheme: ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್: ಯಾರ ಖಾತೆಗೆಲ್ಲ ಹಣ ಜಮೆ ಆಗುತ್ತೆ ಗೊತ್ತಾ??
Anna Bhagya scheme: ಅನ್ನ ಭಾಗ್ಯ (Anna Bhagya scheme)ಪಡಿತರ ಚೀಟಿದಾರರಿಗೆ(Ration Card Holder)ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ (K.H Muniyappa)ಅನ್ನ ಭಾಗ್ಯ ಯೋಜನೆ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೆ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದುಸಚಿವರು ತಿಳಿಸಿದ್ದಾರೆ. ರಾಜ್ಯದಲ್ಲಿ ಶೇಕಡ 70ರಿಂದ 80ರಷ್ಟು ಜನ ಅಕ್ಕಿ ಬೇಕು ಎಂದು ಹೇಳುತ್ತಿದ್ದು, ಹೀಗಾಗಿ ,ಅಕ್ಕಿ ಕೊಡುವ ಯೋಜನೆ ರೂಪಿಸಲಾಗಿದೆ. ತೆಲಂಗಾಣ, ಆಂಧ್ರಪ್ರದೇಶ ಸೇರಿ ಹಲವೆಡೆಯಿಂದ ಅಕ್ಕಿ ಖರೀದಿಗೆ ಕ್ರಮ ಕೈಗೊಳ್ಳಲಾಗಿದ್ದು, ಸೂಕ್ತ ಬೆಲೆ ನಿಗದಿಯಾದ ಕೂಡಲೇ ಅಕ್ಕಿ ಕೊಡುವ ಪ್ರಯತ್ನವನ್ನು ನಾವು ಮಾಡುತ್ತೇವೆ. ಅಲ್ಲಿಯವರೆಗೆ ನಾವು ಹೇಳಿದಂತೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ ನೀಡಿದ್ದಾರೆ.