CM Siddaramaiah on NPC: NPC ರದ್ದತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು??
CM Siddaramaiah on NPC: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddarmayya)ಎನ್‌ಪಿಎಸ್ ರದ್ದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಎನ್.ಪಿ.ಎಸ್. ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು(CM Siddaramaiah on NPC) ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎನ್.ಪಿ.ಎಸ್ ರದ್ದತಿಯ ಕುರಿತು ಸಮಗ್ರವಾಗಿ ಅಧ್ಯಯನ ನಡೆಸಿ ನಿರ್ಣಯ ಕೈಗೊಳ್ಳಲಾಗುತ್ತದೆ. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳನ್ನು ಕೂಡ ಪರಿಶೀಲಿಸಲಾಗುತ್ತದೆ. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಿದೆ ಎಂದಿದ್ದಾರೆ.