Puttur ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!!!

Share the Article

SulliaPadavu: ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲು ನಿವಾಸಿ ಚಂದ್ರಶೇಖರ್‌ ಗೌಡ ದಂಪತಿಗಳ ಮಗಳು ದೀಕ್ಷಾ (16) ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.

ತಂದೆ ತಾಯಿ ಕೃಷಿ ಕೆಲಸದಲ್ಲಿ ಇದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ಈಕೆ ರೂಮಲ್ಲಿ ಫ್ಯಾನ್‌ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಈಕೆ, ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply