Traffic Rules Break: ವಾಹನ ಸವಾರರೇ ಎಚ್ಚರ, ಟ್ರಾಫಿಕ್ ರೂಲ್ಸ್ ಪದೇ ಪದೇ ಬ್ರೇಕ್ ಮಾಡುತ್ತಿದ್ದೀರಾ??

ಹಾಗಿದ್ರೆ ನಿಮಗೆ ಸಂಕಷ್ಟ ತಪ್ಪಿದ್ದಲ್ಲ!!

Traffic Rules Break: ಸರ್ಕಾರ ಅದೆಷ್ಟೇ ಸಂಚಾರಿ ನಿಯಮ ಜಾರಿಗೆ ತಂದರೂ ಕೂಡ ಅದನ್ನು ಗಾಳಿಗೆ ತೂರಿ ರೂಲ್ಸ್ ಬ್ರೇಕ್(Traffic Rules Break) ಮಾಡುವವರೇ ಹೆಚ್ಚಿನ ಈ ರೀತಿ ಸಂಚಾರಿ ನಿಯಮಗಳನ್ನು( Traffic Rules)ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರೆ ಆ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ (Driving License) ಅಮಾನತು ಮಾಡಲು ಎಲ್ಲಾ ಟ್ರಾಫಿಕ್ ಪೊಲೀಸ್ (Traffic Police) ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

 

ಸಂಚಾರಿ ನಿಯಮ ಉಲ್ಲಂಘನೆಯಿಂದ ಅಪಘಾತ(Accident)ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಈ ರೀತಿ ಮೃತಪಟ್ಟವರ(Death)ಸಂಖ್ಯೆ ಕೂಡ ಏರಿಕೆಯಾಗಿದೆ. ಈ ನಿಟ್ಟಿನಲ್ಲಿ ಸಂಚಾರಿ ಪೊಲೀಸರು ಟ್ರಾಫಿಕ್ ನಿಯಮಗಳನ್ನು ಪಾಲಿಸುವಂತೆ ಸಾಕಷ್ಟು ಬಾರಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಾರೆ. ಇದರ ಜೊತೆಗೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡ ಪ್ರಯೋಗವನ್ನು ಮಾಡುತಿದ್ದಾರೆ. ಆದಾಗ್ಯೂ ಕೆಲ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆ, ಅಂತವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

 

ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ಡಿಎಲ್ ಅಮಾನತು ಮಾಡಲು ಸೂಚಿಸಲಾಗಿದ್ದು, ಈಗಾಗಲೇ 2974 ಡ್ರೈವಿಂಗ್ ಲೈಸನ್ಸ್ ಅಮಾನತಿಗೆ ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಬೇರೆ ಬೇರೆ ಜಿಲ್ಲಾ ಸಾರಿಗೆ ಕಚೇರಿಗಳಿಗೆ ರವಾನಿಸಲಾಗಿದೆ.ಇನ್ನುಳಿದ 2263 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತ್ತುಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.

Leave A Reply

Your email address will not be published.