Yuva Nidhi ಯೋಜನೆ ಜಾರಿಗೆ ಡೇಟ್ ಫಿಕ್ಸ್; ಈ ದಿನದಂದು ಮುಖ್ಯಮಂತ್ರಿಯಿಂದ ಚಾಲನೆ!!

Yuva Nidhi Scheme: ರಾಜ್ಯ ಸರ್ಕಾರದ(Congress)ಗ್ಯಾರಂಟೀ ಯೋಜನೆಗಳಲ್ಲಿ(Gurantee Scheme)ಯುವನಿಧಿ ಯೋಜನೆ(Yuva Nidhi Scheme) ಜಾರಿಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೆ ಯೋಜನೆಯ ಪ್ರಯೋಜನ ಪಡೆಯಲು ಕಾತುರದಿಂದ ಎದುರು ನೋಡುತ್ತಿರುವ ಮಂದಿಗೆ ಗುಡ್ ನ್ಯೂಸ್ ಇಲ್ಲಿದೆ ನೋಡಿ!!

 

 

ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddarmayya)ಶುಕ್ರವಾರ ಅಂದರೆ ನಾಳೆ ಜನವರಿ 12ರಂದು ಚಾಲನೆ ನೀಡಲಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭ ಘೋಷಿಸಿದ 5ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

 

ಕಾಂಗ್ರೆಸ್‌ನ ಐದನೇ ಗ್ಯಾರಂಟಿ, ಯುವನಿಧಿಗೆ ಈ ವರ್ಷ ನೋಂದಣಿಗೆ 5.29 ಲಕ್ಷ ಟಾರ್ಗೆಟ್ ಇದ್ದು, ಈವರೆಗೆ 61 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ ಎನ್ನಲಾಗಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸುಮಾರು ಒಂದೂವರೆ ಲಕ್ಷ ಜನರು ಭಾಗಿಯಾಗಲಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಂದ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.