B Y vijayendra: ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊನೆಗೂ ಕೈ ಕೊಟ್ಟ ಬಿಜೆಪಿ ಅಧ್ಯಕ್ಷ ವಿಜಯೇಂದ್ರ!!
B Y vijayendra: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ(Anath kumar hegde) ಇದೀಗ ಸಂಚಕಾರ ಎದುರಾಗಿದ್ದು ಅವರ ಹೇಳಿಕೆಯಿಂದ ಬಿಜೆಪಿಯೂ ಇದೀಗ ಅಂತರ ಕಾಯ್ದುಕೊಂಡಿದೆ.
ಹೌದು, ಮುಖ್ಯಮಂತ್ರಿಗಳ(CM) ಕುರಿತು ಹಾಗೂ ಮಸೀದಿ ಧ್ವಂಸ ಮಾಡುವ ಕುರಿತು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿರುವ ಹೇಳಿಕೆ ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಅದು ಪಕ್ಷದ ಹೇಳಿಕೆಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(B Y vijayendra)ಹೇಳಿದ್ದಾರೆ. ಇದರಿಂದ ಬಿಜೆಪಿ ರಾಜ್ಯಾಧ್ಯಕ್ಷರೇ ಅನಂತ್ ಕುಮಾರ್ ಹೆಗಡೆಗೆ ಬಿಗ್ ಶಾಕ್ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಬಳಿಯ ಮಾರುತಿ ಆಸ್ಪತ್ರೆ ಮುಂದಿನ ಗೋಡೆ ಮೇಲೆ ‘ಮತ್ತೊಮ್ಮೆ ಮೋದಿ’ ಗೋಡೆ ಬರಹದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆಗಳ ವಿಚಾರದ ಕುರಿತು ಮಾತನಾಡಿ, ಮೊದಲೇ ರಾಜಕಾರಣಿಗಳು ಅಂದ್ರೆ ಜನ ನಂಬಲ್ಲ, ಅಂಥ ಪರಿಸ್ಥಿತಿ ಇದೆ. ಯಾರೇ ಇದ್ರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತು ಇರಬೇಕು. ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗಳನ್ನು ನಾನೂ ಗಮನಿಸಿದ್ದೇನೆ. ನಾನು ಅವರ ಜತೆಗೂ ಇದರ ಬಗ್ಗೆ ಮಾತಾಡ್ತೇನೆ. ಅನಂತ ಕುಮಾರ್ ಹೆಗಡೆ ಜೊತೆ ವೈಯಕ್ತಿಕವಾಗಿ ಮಾತನಾಡುತ್ತೇನೆ. ಅದು ಅದು ಅವರ ವೈಯಕ್ತಿಕ ನಿಲುವು, ಅದು ಪಕ್ಷದ ನಿಲುವು ಅಲ್ಲ ಎಂದಿದ್ದಾರೆ.