Shimoga: ಹಿಂದೂ ಜಾಗರಣ ವೇದಿಕೆ ಸಂಚಾಲಕನ ಮೇಲೆ ಹಲ್ಲೆ!!!

Share the Article

Shimogga: ಹಿಂದೂ ಜಾಗರಣ ವೇದಿಕೆ ಸಂಚಾಲಕ ಶಿವಕುಮಾರ್‌ ಮೇಲೆ ಶಿವಮೊಗ್ಗ ನಗರದ ತೀರ್ಥಹಳ್ಳಿ ಮುಖ್ಯರಸ್ತೆಯ ವಿಜಯ ಮೋಟಾರ್ಸ್‌ ಮುಂಭಾಗದ ರಸ್ತೆಯಲ್ಲಿ ಹಲ್ಲೆ ನಡೆದಿದೆ. ನಡುರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆದಿದ್ದು ಈ ಕುರಿತು ಮಾಧ್ಯಮವೊಂದು ವರದಿ ಮಾಡಿದೆ.

ಸ್ಕೂಟಿ ಹಾಗೂ ಬೈಕಿನಲ್ಲಿ ಬಂದ 4 ಜನ ಯುವಕರಿಂದ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಅವಾಚ್ಯವಾಗಿ ನಿಂದಿಸಿ ದಾಳಿ ಮಾಡಲಾಗಿರುವ ಕುರಿತು ವರದಿಯಾಗಿದೆ. ಜೀವ ಸಹಿತ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿರುವ ಕುರಿತು ವರದಿಯಾಗಿದೆ. ಏರ್ಪೋರ್ಟ್‌ನನಲ್ಲಿ ಟ್ಯಾಕ್ಸಿ ಡ್ರೈವಿಂಗ್ ಕೆಲಸ ಮಾಡುತ್ತಿರುವ ಸಂತೆಕಡೂರು ಗ್ರಾಮದ ಶಿವಕುಮಾರ್, ಸರ್ಕಾರಿ ಬಸ್ ನಿಲ್ದಾಣಕ್ಕೆ ಪ್ಯಾಸೆಂಜರ್ ಡ್ರಾಪ್ ಮಾಡಿ ಹೋಗುವಾಗ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: Love Jihad: ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಹಿಂದೂ ಸಂಘಟನೆಯಿಂದ ಪ್ರತಿಭಟನೆ!!

ಹಲ್ಲೆ ನಡೆಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಡೆದಿದ್ದು, ಗಾಯಗೊಂಡ ಶಿವಕುಮಾರ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಶಿವಕುಮಾರ್‌ ಅವರು ಹಿಂದೂ ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವ್ಯಕ್ತಿ. ಮುಸ್ಲಿಂ ಯುವಕ-ಹಿಂದೂ ಯುವತಿಯರು ಪಾರ್ಕ್‌ನಲ್ಲೇನಾದರೂ ಮಾತನಾಡುತ್ತಿದ್ದರೆ ಇದರ ಕುರಿತು ಸ್ಥಳೀಯ ಪೊಲೀಸ್‌ ಠಾಣೆಗೆ ವಿಚಾರ ತಿಳಿಸುತ್ತಿದ್ದ ಕಾರಣ ಯುವಕರ ಗುಂಪು ಫಾಲೋ ಮಾಡಿ ಹಲ್ಲೆ ಮಾಡಿರುವ ಕುರಿತು ವರದಿಯಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply