Karnataka: ರಾಜ್ಯದ ಈ ಭಾಗಗಳಲ್ಲಿ ಹೈ ಅಲರ್ಟ್‌, ಸೂಕ್ಷ್ಮ ಪ್ರದೇಶಗಳಲ್ಲಿ KSRP ನಿಯೋಜನೆ!!! ಯಾಕಾಗಿ?

Karnataka Police: ಅಯೋಧ್ಯೆಯಲ್ಲಿ ಶ್ರೀರಾಮನ ದೇವಸ್ಥಾನ ಪ್ರತಿಷ್ಠಾಪನೆ ಕಾರಣ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಸೂಚನೆ ನೀಡಿದೆ. ಬೆಂಗಳುರು ನಗರ ಸೇರಿ ರಾಜ್ಯದ ಎಲ್ಲಾ ಕಡೆಗಳಲ್ಲಿ ಈ ತಿಂಗಳ 22 ರವರೆಗೂ ಹೈ ಅಲರ್ಟ್‌ ಆಗಿರಬೇಕು ಎಂದು ಕಮಿಷನರೇಟ್‌ ಹಾಗೂ ಜಿಲ್ಲಾ ಎಸ್‌ಪಿಗಳಿಗೆ ಡಿಜಿ ಐಜಿಪಿ ಅಲೋಕ್‌ ಮೋಹನ್‌ ಸೂಚನೆ ನೀಡಿರುವ ಕುರಿತು ವರದಿಯಾಗಿದೆ.

ಮಂಗಳೂರು, ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಉಡುಪಿ ಸೇರಿ ಕೆಲವು ಜಿಲ್ಲೆಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: Fastag KYC Update: ಫಾಸ್ಟ್ಯಾಗ್‌ ಬಳಕೆದಾರರೇ ಗಮನಿಸಿ; ಜ.31 ರಂದು ಕೆವೈಸಿ ಪೂರ್ಣಗೊಳಿಸದ ಖಾತೆಗಳು ನಿಷ್ಟ್ರಿಯ!!!

ಸೂಕ್ಷ್ಮ ಪ್ರದೇಶದಲ್ಲಿ ಕೆಎಸ್‌ಆರ್‌ಪಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಶ್ರೀರಾಮನ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಪೊಲೀಸರ ಕಣ್ಗಾವಲಿಗೆ ಸೂಚನೆ ನೀಡಲಾಗಿದೆ. ಪೂಜೆ ಪುನಸ್ಕಾರ ಬಿಟ್ಟು ದೇವಸ್ಥಾನಗಳಲ್ಲಿ ಬೇರೆ ಚಟುವಟಿಕೆಗಳಿಗೆ ಅವಕಾಶ ಮಾಡಲು ಅವಕಾಶ ನೀಡಬಾರದು ಎಂದು ಸೂಚನೆ ನೀಡಲಾಗಿದೆ.

ರಾಜಕೀಯ ಬಗ್ಗೆ ಮಾತನಾಡುವುದು, ಪ್ರತಿಭಟನೆ ಮಾಡುವುದು, ಸಮಾಜದ ಶಾಂತಿ ಭಂಗ ಮಾಡುವ ಘೋಷಣೆ ಮಾಡುವುದು ಸೇರಿ ಇನ್ನಿತರ ಚಟುವಟಿಕೆಗಳ ಮೇಲೆ ಕಣ್ಗಾವಲು ಇಡಬೇಕು ಎಂಬ ಸಂದೇಶ ನೀಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಬಹೇಳನಕಾರಿಯಾಗಿ ಪೋಸ್ಟ್‌ ಮಾಡುವುದರ ಮೇಲೆ ಕಣ್ಣಿಡಲಾಗಿದೆ. ಅಧಿಕಾರಿಗಳು ಜ.22 ರವರೆಗೆ ಎಲ್ಲಾ ಅಧಿಕಾರಿಗಳು ತಮ್ಮ ಲಿಮಿಟ್ಸ್‌ ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ ಎಂಬ ಖಡಕ್‌ ಸೂಚನೆ ನೀಡಲಾಗಿದೆ.

Leave A Reply

Your email address will not be published.