School Bus Accident: ಶಾಲಾ ಬಸ್ ಪಲ್ಟಿ; 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ!!

School Bus Accident: ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್(Assam School Bus)ಪಲ್ಟಿಯಾಗಿದ್ದು, ಇದರಿಂದ 25ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ(Students Injured)ಘಟನೆ ವರದಿಯಾಗಿದೆ.

ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್‌ನಿಕ್‌ಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಅನುಸಾರ, ಇಂದು ಬೆಳಗ್ಗೆ 10:30 ರ ಸುಮಾರಿಗೆ ರಾಜ್ಯದ ಹೈಲಕಂಡಿ ಜಿಲ್ಲೆಯ ಕತಖಾಲ್ ಪ್ರದೇಶದಲ್ಲಿ ಈ ಅವಘಡ ( School Bus Accident)ಸಂಭವಿಸಿದೆ.

ಹೆದ್ದಾರಿಯಿಂದ ಉರುಳುವ ಮೊದಲು ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ ಸವಾರ ಸೈಕಲ್ ಸವಾರನನ್ನು ರಕ್ಷಿಸಲು ಯತ್ನಿಸಿದ ಸಂದರ್ಭ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡ 25 ರಲ್ಲಿ ಸುಮಾರು 20 ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಒಟ್ಟು ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರಕರಣದ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Edible Oil Import : ಗೃಹಿಣಿಯರಿಗೆ ಸಿಹಿ ಸುದ್ದಿ; ಖಾದ್ಯ ತೈಲ ಕಡಿಮೆ ದರದಲ್ಲಿ ಪೂರೈಕೆಗೆ ಸರ್ಕಾರ ನಿರ್ಧಾರ!!

Leave A Reply

Your email address will not be published.