Yatindra Siddaramaiah: ಲೋಕಸಭಾ ಚುನಾವಣೆ ಬಳಿಕ ‘ಗ್ಯಾರಂಟಿ’ ಯೋಜನೆಗಳು ರದ್ದು ?! ಯತೀಂದ್ರ ಸಿದ್ದರಾಮಯ್ಯ ಕೊಟ್ರು ಬಿಗ್ ಅಪ್ಡೇಟ್

Yatindra Siddaramaiah: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಿಗೆ ರಾಜ್ಯಾದ್ಯಂತ ಭಾರೀ ರೆಸ್ಪಾನ್ಸ್ ಸಿಗುತ್ತಿದೆ. ನಾಡಿನ ಜನ ಇದರ ಲಾಭ ಪಡೆಯುತ್ತಿದ್ದಾರೆ. ಇದೀಗ ಈ ಎಲ್ಲಾ ಗ್ಯಾರಂಟಿಗಳು ರದ್ದಾಗುತ್ತವೆ ಎನ್ನುವ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಯತೀಂದ್ರ ಸಿದ್ದರಾಮಯ್ಯ(Yatindra Siddaramaiah)ಬಿಗ್ ಅಪ್ಡೇಟ್ ಒಂದನ್ನು ನೀಡಿದ್ದಾರೆ.

ಹೌದು, ಹಾಸನದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಸ್ಫೋಟಕವಾದ ಹೇಳಿಕೆಯನ್ನು ನೀಡಿದ್ದು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿಎಂ ಸಿದ್ದರಾಮಯ್ಯನವರು ಪೂರ್ಣಾ ಅವಧಿ ಐದು ವರ್ಷಗಳವರೆಗೆ ಸಿಎಂ ಆಗುತ್ತಾರೆ. ಇದರಿಂದ 5 ವರ್ಷ ಸಂಪೂರ್ಣವಾಗಿ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂಬ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

ಅಲ್ಲದೆ 2024ರ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದ್ದು, ಮುಂದಿನ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತೆ. ಹಾಗಾಗಿ ನಿಮ್ಮ ಬಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಮನವಿ ಮಾಡಿದ್ದಾರೆ.

ಇದೀಗ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯು ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇದರಿಂದಾಗಿ ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುವುದಿಲ್ಲ, ಇದರಿಂದ ಗ್ಯಾರಂಟಿ ಯೋಜನೆಗಳು ಕೂಡ ರದ್ಧಾಗುತ್ತದೆ ಎಂಬ ಸಂದೇಶವನ್ನು ಅವರು ರವಾನಿಸಿದ್ದಂತಿದೆ.

Leave A Reply

Your email address will not be published.