C M Siddaramaiah: ರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆ ರಜೆ ನೀಡುವ ವಿಚಾರ- ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!!
C M Siddaramaiah: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು ದೇಶಾದ್ಯಂತ ಸಂಭ್ರಮ ಮನೆಮಾಡಿದೆ. ಇದೀಗ ಬಾಲ ರಾಮನ ಮೂರ್ತಿಯು ಗರ್ಭಗುಡಿ ಪ್ರವೇಶಿಸಿದ್ದು, ಐತಿಹಾಸಿಕ ಕ್ಷಣಕ್ಕೆ ದಿನಗಣನೆ ಶುರುವಾಗಿದೆ. ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ದೇಶದ ಕೆಲವು ರಾಜ್ಯಗಳು ಜ.22 ರಂದು ರಜೆ ಘೋಷಿಸಿವೆ. ಇದೀಗ ಕರ್ನಾಟಕದಲ್ಲೂ ರಜೆ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರು(CM Siddaramaiah)ಮಹತ್ವದ ಹೇಳಿಕೆ ನೀಡಿದ್ದಾರೆ.
ಹೌದು, ರಾಮ ಮಂದಿರ(Rama mandira) ಉದ್ಘಾಟನೆಗೆ ದೇಶದ ಹಲವು ರಾಜ್ಯಗಳು ರಜೆ ಘೋಷಿಸಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಗೋವಾ ಹಾಗೂ ಮಹಾರಾಷ್ಟ್ ಸರ್ಕಾರ ಕೂಡ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿವೆ. ಇದೀಗ ಕರ್ನಾಟಕದಲ್ಲೂ ರಜೆ ನೀಡಬೇಕೆಂಬ ಕೂಗು ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಹೇಳಿದ್ದಾರೆ.
ಇನ ಅಯೋಧ್ಯೆಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಉದ್ಘಾಟನೆ ದಿನ ಹೋಗುವುದಿಲ್ಲ. ಇನ್ನೊಂದು ದಿನ ಅಲ್ಲಿಗೆ ಹೋಗುತ್ತೇನೆ ಎಂದು ಮೊದಲೇ ಹೇಳಿದ್ದೇನೆ. ನೀವು ಈ ಪ್ರಶ್ನೆಯನ್ನು ಮತ್ತೆ ಮತ್ತೆ ಏಕೆ ಕೇಳುತ್ತೀರಿ. ಎಂದು ಸುದ್ದಿಗಾರರನ್ನು ಕೇಳಿದರು.