Ram Mandir Live: ರಾಮ ಮಂದಿರ ನೇರ ಪ್ರಸಾರ ನಿಷೇಧ ; ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಸ್ಟಾಲಿನ್ ಸರ್ಕಾರ ಸ್ಪಷ್ಟನೆ!!

Share the Article

Ayodhya Ram Mandir: ಅಯೋಧ್ಯೆ ರಾಮಮಂದಿರ(Ayodhya Ram Mandir) ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು(Tamilandu)ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ತಮಿಳುನಾಡು ಸರಕಾರದ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು. ಆದರೆ ಈ ಕುರಿತು ತಮಿಳುನಾಡು ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಈ ಆರೋಪವನ್ನು ತಳ್ಳಿ ಹಾಕಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಹಿತ ನಾನಾ ಧಾರ್ಮಿಕ ಚಟುವಟಿಕೆಗಳ ನೇರ ವೀಕ್ಷಣೆಗೆ ತಮಿಳುನಾಡು ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಬಲ್‌ ಕಡಿತಗೊಳಿಸಿ ಕಾರ್ಯಕ್ರಮ ವೀಕ್ಷಿಸದಂತೆ ಮಾಡಲಾಗುತ್ತಿದೆ. ತಮಿಳುನಾಡು ಹಿಂದೂ ವಿರೋಧಿ ಹಾಗೂ ದ್ವೇಷದ ಪ್ರಕ್ರಿಯೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಗಂಭೀರ ಆರೋಪ ಮಾಡಿದ್ದಾರೆ.

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು(Hindu Religious and Charitable Endowments Department) ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆಯನ್ನು ನಿಷೇಧಿಸಿಲ್ಲ. ಈ ರೀತಿಯ ಯಾವುದೇ ಆದೇಶಗಳನ್ನು ನಾವು ಜಾರಿ ಮಾಡಿಲ್ಲ. ರಾಮಮಂದಿರಗಳಲ್ಲಿ ಚಟುವಟಿಕೆ ನಡೆಸಲು ಯಾವುದೇ ಅಡ್ಡಿಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆರೋಪವನ್ನು ತಮಿಳುನಾಡು ತಳ್ಳಿಹಾಕಿದೆ.

ತಮಿಳುನಾಡಿನ ಸೇಲಂನಲ್ಲಿ ಆಯೋಜಿಸಿರುವ ಡಿಎಂಕೆ ಯುವ ಸಮಾವೇಶದ ಯಶಸ್ಸನ್ನು ದಿಕ್ಕುತಪ್ಪಿಸುವ ನಿಟ್ಟಿನಲ್ಲಿಯೇ ರಾಮಮಂದಿರ ಕಾರ್ಯಕ್ರಮ ವೀಕ್ಷಣೆಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಸೇಕರ ಬಾಬು ಹೇಳಿದ್ದಾರೆ.

Leave A Reply