Government Holiday: ನಾಳೆ ಕರ್ನಾಟಕದಲ್ಲಿ ಸರಕಾರಿ ರಜೆ ಇದೆಯೇ? ಪರೋಕ್ಷ ನಿರಾಕರಣೆಯ ಸುಳಿವು !!

Government Holiday: ಅಯೋಧ್ಯೆ ರಾಮ ಮಂದಿರದಲ್ಲಿ(Ram Mandir)ಬಾಲ ರಾಮನ ಪ್ರತಿಷ್ಠಾಪನೆಯ ಪುಣ್ಯ ಗಳಿಗೆಯನ್ನು ಕಣ್ತುಂಬಿಕೊಳ್ಳಲು ದೇಶದ ಹಲವು ರಾಜ್ಯಗಳು ಈಗಾಗಲೇ ರಜೆ ಘೋಷಣೆ ಮಾಡಿವೆ. ಈ ನಡುವೆ, ಕರ್ನಾಟಕದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ(School Holiday)ಘೋಷಣೆ ಆಗಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ.

ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಉಪ ಮುಖ್ಯಮಂತ್ರಿ ಮಹತ್ವದ ಸ್ಪಷ್ಟನೆಗಳನ್ನು ನೀಡಿದ್ದಾರೆ. ಜನವರಿ 22 ಸೋಮವಾರದಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಜೆ ಘೋಷಣೆ ಮಾಡುವ ಸಾಧ್ಯತೆ ಬಹುತೇಕ ಅನುಮಾನ ಎನ್ನಲಾಗಿದೆ. ಈ ಕುರಿತು ರಜೆ ಘೋಷಣೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷವಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುತ್ತಾರೆ. ಅವರು ಆದೇಶ ನೀಡಿದರೆ ಸಚಿವನಾಗಿ ಅದನ್ನು ಜಾರಿಗೆ ತರುವುದಷ್ಟೇ ನಮ್ಮ ಕೆಲಸ ಆಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹೀಗಾಗಿ, ಅಯೋಧ್ಯಾ ರಾಮ ಮಂದಿರದಲ್ಲಿ ಬಾಲ ರಾಮನ ಪ್ರತಿಷ್ಠಾಪನೆಯ ದಿನ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Leave A Reply

Your email address will not be published.