Ram Mandir ಉದ್ಘಾಟನೆಗೆ ಗೃಹ ಸಚಿವ ಅಮಿತ್ ಶಾ ಗೈರು!!

Ayodhya Ram Mandir: ಇಂದು ಭಾರತೀಯರ ಶತಮಾನಗಳ ಕನಸು ನನಸಾಗುವ ಅಮೋಘ ಗಳಿಗೆ ಸನ್ನಿಹಿತವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ(Ayodhya Ram Mandir)ರಾಮಲಲ್ಲಾ ಮೂರ್ತಿ ಪ್ರಾಣ (Ram Lalla Idol)ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಇಡೀ ದೇಶದ ಜನತೆ ಎದುರು ನೋಡುತ್ತಿದ್ದಾರೆ. ಈ ನಡುವೆ, ಅಯೋಧ್ಯೆ ರಾಮ ಮಂದಿರದಲ್ಲಿ ನಡೆಯಲಿರುವ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith shah)ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ.

ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಈಗಾಗಲೇ ಆಗಮಿಸಿದ್ದಾರೆ. ಇದಲ್ಲದೆ , ಬಿಜೆಪಿಯ ಹಲವು ಹಿರಿಯ ನಾಯಕರು ಅಯೋಧ್ಯೆಗೆ ಆಗಮಿಸಿದ್ದು, ಇನ್ನು ಹಲವು ನಾಯಕರು ವಿವಿಧ ದೇವಾಲಯಗಳಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.

ಈ ನಡುವೆ ಗೃಹ ಸಚಿವ ಅಮಿತ್ ಶಾ ಕೂಡ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಹೀಗಾಗಿ, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಎನ್ನಲಾಗಿದೆ.ಅಮಿತ್ ಶಾ ಅವರು ಕುಟುಂಬದೊಂದಿದೆ ಬಿರ್ಲಾ ಮಂದಿರದಲ್ಲಿ ಉಪಸ್ಥಿತರಿರಲಿದ್ದು, ಹೀಗಾಗಿ ಸುಮಾರು ಮೂರು ಗಂಟೆಗಳ ಕಾಲ ಲೈವ್ ಸ್ಟೀಮಿಂಗ್ ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ. ಅದೇ ರೀತಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಕೂಡ ಶೀತ ಗಾಳಿ ಹಿನ್ನೆಲೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.