CM SIddaramaiah: ಹಣೆಗೆ ಕುಂಕುಮ ಹಚ್ಚಿ ಹನುಮನಿಗೆ ಕೈ ಮುಗಿದ ಸಿಎಂ; ಬಿಲ್ಲು ಬಾಣ ಹಿಡಿದು ನಾನು ನಾಸ್ತಿಕನಲ್ಲ, ಆಸ್ತಿಕ ಎಂದ CM ಸಿದ್ದರಾಮಯ್ಯ!!!
CM Siddaramaiah: ಅಯೋಧ್ಯೆ (Ayodhya) ರಾಮ ಪ್ರಾಣ ಪ್ರತಿಷ್ಠಾಪನಾ (Rama Mandira Prana Pratishtha) ದಿನದಂದೇ ಮಹದೇವಪುರ ಕ್ಷೇತ್ರದ ಹಿರಂಡಹಳ್ಳಿಯ ಶ್ರೀರಾಮ-ಸೀತೆ ದೇಗುಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಉದ್ಘಾಟನೆ ಮಾಡಿದ್ದಾರೆ.
ಈ ದೇವಾಲಯದಲ್ಲಿ ಸೀತಾ-ರಾಮ, ಲಕ್ಷ್ಮಣ ಹಾಗೂ 33 ಅಡಿ ಆಂಜನೇಯ ದೇವರ ಮೂರ್ತಿಯಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಭೈರತಿ ಸುರೇಶ್, ರಾಮಲಿಂಗಾ ರೆಡ್ಡಿ (Minister Ramalinga Reddy) ಭಾಗವಹಿಸಿದ್ದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿರುವ ವಿಚಾರ ಹಂಚಿಕೊಂಡಿದ್ದಾರೆ.
ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ ಎಂದು ಸಿಎಂ ತಿಳಿಸಿದ್ದಾರೆ.ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳಿವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತೇವೆ.
ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿಯಾಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟಿದ್ದರು. ಅಷ್ಟೆ ಅಲ್ಲದೇ, ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಹಾಗೂ ಆಂಜನೇಯರೆಲ್ಲಾ ಸಕುಟುಂಬಸ್ಥರು, ಇವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.