Home Karnataka State Politics Updates C M Siddaramaiah: ನೀವೇ ಕಟ್ಟಿದ ರಾಮಮಂದಿರದೊಳಗೆ ನಿಂತು ಈ ಬಗ್ಗೆ ಪ್ರಮಾಣ ಮಾಡಿ ಹೇಳಿ...

C M Siddaramaiah: ನೀವೇ ಕಟ್ಟಿದ ರಾಮಮಂದಿರದೊಳಗೆ ನಿಂತು ಈ ಬಗ್ಗೆ ಪ್ರಮಾಣ ಮಾಡಿ ಹೇಳಿ – ಪಿಎಂಗೆ ಹೊಸ ಸವಾಲೆಸೆದ ಸಿದ್ದರಾಮಯ್ಯ !!

C M Siddaramaiah

Hindu neighbor gifts plot of land

Hindu neighbour gifts land to Muslim journalist

C M Siddaramaiah: ರಾಮಜನ್ಮಭೂಮಿ (Ram Janmabhoomi) ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನಾ (Ram Lalla Murti Pranapratishthapane) ಕಾರ್ಯವು ಅದ್ಧೂರಿಯಾಗಿ ನೆರವೇರಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಹೊಸ ಸವಾಲೆಸೆದಿದ್ದು, ಮೋದಿಯವರೇ ಈ ಬಗ್ಗೆ ನೀವೇ ಕಟ್ಟಿದ ರಾಮ ಮಂದಿರದೊಳಗೆ ನಿಂತು ಪ್ರಮಾಣ ಮಾಡಿ ಹೇಳಿ ಎಂದಿದ್ದಾರೆ.

https://x.com/siddaramaiah/status/1749384598235357467?t=5tASNmlSY-_aW5inWlDq_Q&s=08

ಪ್ರಧಾನಿ ಮೋದಿ ನೆರವೇರಿಸುತ್ತಿರುವುದನ್ನು ಕಾಂಗ್ರೆಸ್‌ ವಿರೋಧಿಸಿತ್ತು. ಸಿಎಂ ಸಿದ್ದರಾಮಯ್ಯ ಸಹ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಈಗ ಸಿದ್ದರಾಮಯ್ಯ(C M Siddaramaiah)ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಒಂದನ್ನು ಮಾಡಿದ್ದು, ತಮ್ಮ ರಾಮ ಭಕ್ತಿಯನ್ನು ಪ್ರದರ್ಶನ ಮಾಡುವುದರೊಂದಿಗೆ ನರೇಂದ್ರ ಮೋದಿ ಅವರನ್ನು ಚೀನಾ ಗಡಿ ವಿವಾದದ ಬಗ್ಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Pejavara shri: ಪ್ರಧಾನಿ ಮೋದಿ ರಾಮನ ಪ್ರಾಣ ಪ್ರತಿಷ್ಠೆ ಮಾಡುವಾಗ ಮುಖ ಮುಚ್ಚಿಕೊಂಡ ಪೇಜಾವರ ಶ್ರೀ – ಯಾಕಾಗಿಯಂತೆ ಗೊತ್ತಾ?!

ಹೌದು, ಪ್ರಧಾನಿ ನರೇಂದ್ರ ಮೋದಿಯವರೇ (narendra Modi) ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ ಎಂದು ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಮಾಡಿದ ಟ್ವೀಟ್ ಅಲ್ಲಿ ಏನಿದೆ?

ಪ್ರಧಾನಿ @narendramodi ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ನೀಡಿದ್ದಿರಿ. ಆದರೆ, ಇದಕ್ಕಾಗಿ ಏನು ಮಾಡಿದಿರಿ? ರೈತರ ಆದಾಯ ದ್ವಿಗುಣಗೊಳಿಸುವುದಿರಲಿ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಬಿಡಿಗಾಸು ಬರ ಪರಿಹಾರವನ್ನೂ ನೀವು ನೀಡಿಲ್ಲ. ಅದೇ ರೀತಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಎಲ್ಲ ರಾಜ್ಯಗಳ ಸಶಕ್ತೀಕರಣಕ್ಕಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದಿರಿ. ವಿಪರ್ಯಾಸವೆಂದರೆ, ಇಂದು ರಾಜ್ಯಗಳಿಗೆ ದಕ್ಕಬೇಕಾದ ಅವುಗಳ ನ್ಯಾಯಯುತ ಪಾಲನ್ನು ಕೂಡ ಕಸಿದುಕೊಂಡಿದ್ದೀರಿ. ಇದರೊಟ್ಟಿಗೆ ಕುತಂತ್ರದಿಂದ ಸೆಸ್‌, ಸರ್ಚಾರ್ಜ್‌ಗಳನ್ನು ಹೆಚ್ಚಿಸಿದ್ದೀರಿ.

ಪ್ರಧಾನಿ ಮೋದಿ ಅವರೇ, ದೇಶದ ಭದ್ರತೆಯ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಪುಂಖಾನುಪುಂಖ ಆಶ್ವಾಸನೆಗಳನ್ನು ಕೊಟ್ಟಿದ್ದಿರಿ. ಆದರೆ, ಗಡಿಯೊಳಗೆ ಅತಿಕ್ರಮಣ ಮಾಡಿ ಅಕ್ರಮ ಸೇನಾ ನಿರ್ಮಾಣ ಚಟುವಟಿಕೆ ಕೈಗೊಂಡಿರುವ ಚೀನಾವನ್ನು ಹಿಂದಕ್ಕೆ ಕಳುಹಿಸಲಾಗದೆ ಚೀನಾ ನಮ್ಮ ಗಡಿಯನ್ನು ಪ್ರವೇಶಿಸಿಯೇ ಇಲ್ಲ ಎನ್ನುವ ಹೇಳಿಕೆ ನೀಡಿಬಿಟ್ಟಿರಿ! ಆ ಮೂಲಕ ಮುಂದಕ್ಕೆ ಇದ್ದ ಗಡಿ ರೇಖೆಯನ್ನು ಹಿಂದಕ್ಕೆ ಎಳೆದ ಶೂರ ನೀವು! ಯಾವ ಗಡಿ ರೇಖೆಯನ್ನು ಕಾಯುವುದಕ್ಕಾಗಿ ನಮ್ಮ ಪರಾಕ್ರಮಿ ಸೈನಿಕರು ಸಂಘರ್ಷ ನಡೆಸಿ ತಮ್ಮ ಪ್ರಾಣವನ್ನೇ ಸಮರ್ಪಿಸಿದರೋ ಆ ಸೈನಿಕರಿಗೆ ನೀವು ಮರಣೋತ್ತರ ಅವಮಾನ ಮಾಡಿದಿರಿ. ಹೀಗೆ, ವಚನ ಪರಿಪಾಲನೆ ಎಂದರೇನು ಎಂಬುದೇ ತಿಳಿಯದ ನೀವು ಯಾವ ಸೀಮೆಯ ರಾಮಭಕ್ತ? ಮತ್ತೊಮ್ಮೆ ಹೇಳುತ್ತೇನೆ, ಅಧಿಕಾರದಲ್ಲಿರುವವರಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯದ ನಿರ್ಮಾಣವನ್ನು ಮಾತ್ರ.