Ram Mandir ಸನಿಹದಲ್ಲೇ ಶೀಘ್ರದಲ್ಲಿ 13 ದೇವಾಲಯಗಳ ನಿರ್ಮಾಣ ಕಾರ್ಯ ಆರಂಭ!!

Ram Mandir: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ (Ram Mandir)ಪ್ರಾಣ ಪ್ರತಿಷ್ಠೆಯನ್ನೂ (Pran prathishta)ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi)ನೆರವೇರಿಸಿದ್ದಾರೆ. ಇದೀಗ ದೇಗುಲವನ್ನು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: Pink WhatsApp ಬಳಕೆದಾರರೇ ಗಮನಿಸಿ, ಪೊಲೀಸ್ ಇಲಾಖೆಯಿಂದ ಬಂತು ಬಿಗ್ ಅಪ್ಡೇಟ್!!

ಈ ನಡುವೆ, ಅಯೋಧ್ಯೆಯನ್ನು ಜಾಗತಿಕ ಆಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಹಲವು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದರ ಭಾಗವಾಗಿ ಕನಿಷ್ಠ 13 ಹೊಸ ದೇವಾಲಯಗಳ ನಿರ್ಮಾಣ ಮಾಡಲಾಗುತ್ತಿದೆ. ಈ ಪೈಕಿ ಆರು ಬೃಹತ್ ದೇವಾಲಯದ ಸಂಕೀರ್ಣದ ಒಳಗೆ ಮತ್ತು ಏಳು ಹೊರಗೆ ಇರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗುರುದೇವ್ ಗಿರಿಜಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಖ್ಯ ದೇವಾಲಯವನ್ನು ಪೂರ್ಣಗೊಳಿಸುವ ಕಾಮಗಾರಿ ಸೇರಿದಂತೆ ಎಲ್ಲ ಯೋಜನೆಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದ್ದಾರೆ

Leave A Reply

Your email address will not be published.