Mangaluru: ತೆಂಕುತಿಟ್ಟಿನ ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

Mangaluru: ತೆಂಕುತಿಟ್ಟು ಯಕ್ಷಗಾನದ ಯಕ್ಷಲೋಕದಲ್ಲಿ ಮೆರೆದ ಪೆರುವಾಯಿ ನಾರಾಯಣ ಶೆಟ್ಟಿಯವರು ಇಹಲೋಕ ತ್ಯಜಿಸಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು.

 

ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ಜನಿಸಿದ್ದ ಇವರು ಕಟೀಲು ಮೇಳವೊಂದರಲ್ಲಿಯೇ 23 ವರ್ಷ ತಿರುಗಾಟ ಮಾಡಿದ್ದರು. ಬಾಕ್ರಬೈಲು ಪಾತೂರಿನಲ್ಲಿ ನೆಲೆಸಿದ್ದ ಇವರು ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ಉಡುಪಿಯ ತುಳುಕೂಟ ಈ ವರ್ಷದ ರಾಮದಾಸ ಸಾಮಗ ನೆಂಪುದ ಪ್ರಶಸ್ತಿಯೂ ಸೇರಿದಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿ, ಬಂಟರ ಸಂಘ ಬೆಂಗಳೂರು, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮಾನ, ಕಲಾರಂಗ ಉಡುಪಿಯ ಗೌರವ, ಅಖೀಲ ಭಾರತ ತುಳು ಕೂಟ, ಕಾವೂರು ವತಿಯಿಂದ ಸಮ್ಮಾನ, ಯಕ್ಷಸಿಂಧೂರ ವಿಟ್ಲ ಇವರಿಂದ ಸಮ್ಮಾನ ನಡೆದಿದೆ.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave A Reply

Your email address will not be published.