OPS: ಉದ್ಯೋಗಿಗಳಿಗೆ ಬಿಗ್ ಅಪ್ಡೇಟ್; ಹಳೆ ಪಿಂಚಣಿಯಲ್ಲಿ ಆಗಿದೆ ಈ ಎಲ್ಲ ಬದಲಾವಣೆಗಳು!!
NPS Scheme: ಕೇಂದ್ರ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ(Pension Scheme)ಯೋಜನೆಯನ್ನು(OPS)ಮರು ಜಾರಿಗೊಳಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಲವು ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು(Old Pension scheme)ಮತ್ತೆ ಜಾರಿಗೆ ತರುವುದಾಗಿ ಘೋಷಿಸಿದೆ.
ಇದನ್ನೂ ಓದಿ: Ram Mandir ಸನಿಹದಲ್ಲೇ ಶೀಘ್ರದಲ್ಲಿ 13 ದೇವಾಲಯಗಳ ನಿರ್ಮಾಣ ಕಾರ್ಯ ಆರಂಭ!!
ಬಹುತೇಕ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲಾಗಿದೆ.ಇದರ ನಡುವೆ ಹೊಸ ಪಿಂಚಣಿ ಯೋಜನೆ (NPS) ಬಗ್ಗೆ ಅಸಮಾಧಾನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಅಥವಾ ಎನ್ ಪಿಎಸ್ ಅನ್ನು(NPS)ಮತ್ತಷ್ಟು ಆಕರ್ಷಕಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಸರ್ಕಾರ ಹಣಕಾಸು ಕಾರ್ಯದರ್ಶಿ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಎನ್‌ಪಿಎಸ್ ಅನ್ನು ಯಾವ ರೀತಿಯಲ್ಲಿ ಸುಧಾರಣೆ ತರಬಹುದು. ಸರ್ಕಾರಿ ನೌಕರರು ಇದರಿಂದ ಉತ್ತಮ ಆದಾಯವನ್ನು ಗಳಿಸಲು ಹೇಗೆ ಕ್ರಮ ಕೈಗೊಳ್ಳಬಹುದು ಎನ್ನುವುದರ ಬಗ್ಗೆ ಯೋಜನೆಗಳನ್ನು ರೂಪಿಸಲು ಸಮಿತಿಯನ್ನು ಕೋರಲಾಗಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ನೇರ ಆರ್ಥಿಕ ನೆರವು ನೀಡುವ ಬಗ್ಗೆ ಕೂಡ ಸರ್ಕಾರ ಚಿಂತನೆ ನಡೆಸಬಹುದು ಎಂದು ಮೂಲಗಳು ಮಾಹಿತಿ ನೀಡಿವೆ. ಹೂಡಿಕೆದಾರರಿಗೆ ಕನಿಷ್ಠ ಲಾಭವನ್ನು ಖಚಿತಪಡಿಸುವುದು ಇದರ ಧ್ಯೇಯವಾಗಿದೆ.
NPS ನಲ್ಲಿ, ಉದ್ಯೋಗಿಯ ಮೂಲ ವೇತನ ಮತ್ತು ಭತ್ಯೆಗಳಿಂದ 10 ಪ್ರತಿಶತವನ್ನು ಕಡಿತ ಮಾಡಲಾಗುತ್ತದೆ. ಇದರ ಅಡಿಯಲ್ಲಿ, ನಿವೃತ್ತಿಯ ನಂತರ ಪಿಂಚಣಿ ಪಡೆಯಲು 40% NPS ನಿಧಿಯಲ್ಲಿ ಹೂಡಿಕೆ ಮಾಡಬೇಕು. ಹೊಸ ಪಿಂಚಣಿ ಯೋಜನೆಯಲ್ಲಿ, ಆರು ತಿಂಗಳಿಗೊಮ್ಮೆ ಡಿಎ ಪಾವತಿಸುವುದಿಲ್ಲ. ರಾಷ್ಟ್ರೀಯ ಪಿಂಚಣಿ ಯೋಜನೆಯು ಷೇರು ಮಾರುಕಟ್ಟೆ ಆಧಾರಿತವಾಗಿದೆ. ಹೀಗಾಗಿ, ಇದು ಕಡಿಮೆ ಸುರಕ್ಷಿತವೆಂದು ಪರಿಗಣಿಸಲಾಗಿದೆ. ಈ ಯೋಜನೆಯು ನಿವೃತ್ತಿಯ ನಂತರ ಸ್ಥಿರ ಪಿಂಚಣಿಯನ್ನು ಖಾತರಿ ಮಾಡುವುದಿಲ್ಲ.
ಹಳೆಯ ಪಿಂಚಣಿ ಯೋಜನೆ (OPS)ಅಡಿಯಲ್ಲಿ,80 ವರ್ಷಗಳ ನಂತರ ಪಿಂಚಣಿ ಹೆಚ್ಚಿಸುವ ನಿಬಂಧನೆಯಿದ್ದು, ಜಿಪಿಎಫ್‌ಗೂ ಅವಕಾಶವಿದೆ.ಈ ಯೋಜನೆಯಡಿಯಲ್ಲಿ, 20 ಲಕ್ಷ ರೂಪಾಯಿಗಳವರೆಗೆ ಗ್ರಾಚ್ಯುಟಿ ನೀಡಲಾಗುತ್ತದೆ.ನಿವೃತ್ತ ನೌಕರನ ಹೆಂಡತಿಗೆ ಅವನ ಮರಣದ ಬಳಿಕ ಪಿಂಚಣಿ ದೊರೆಯಲಿದೆ. ಇದರಡಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಡಿಎ ಕೂಡ ನೀಡಲಾಗುತ್ತದೆ. ಕೊನೆಯದಾಗಿ ಪಡೆದ ಸಂಬಳದ 50 ಪ್ರತಿಶತವನ್ನು ನಿವೃತ್ತಿಯ ನಂತರ ಒಟ್ಟು ಮೊತ್ತದೊಂದಿಗೆ ಮಾಸಿಕ ಪಿಂಚಣಿಯಾಗಿ ಪಾವತಿಸಲಾಗುತ್ತದೆ.