Lok Sabha constituency: ಲೋಕಸಭಾ ಚುನಾವಣೆಗೆ ಎಲ್ಲಿಂದ ಸ್ಪರ್ಧೆ?? ಸಚಿವೆ ಶೋಭಾ ಕರಂದ್ಲಾಜೆ ಯಿಂದ ಶಾಕಿಂಗ್ ಅಪ್ಡೇಟ್!!

Lok Sabha constituency: ಮುಂಬರುವ ಲೋಕಸಭಾ ಚುನಾವಣೆಯ(Lok Sabha constituency) ಕುರಿತು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಾನು ತುಮಕೂರಿಗೆ ಬರಲ್ಲ, ಉಡುಪಿ – ಚಿಕ್ಕಮಗಳೂರಿನಿಂದಲೇ ಸ್ಪರ್ಧೆ ಮಾಡುವ ಕುರಿತು ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Ram Navami: ಈ ವರ್ಷ ರಾಮ ನವಮಿ ಯಾವಾಗ? ಆಚರಣಾ ವಿಧಾನ ಹೇಗೆ?

‘ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಶೋಭಾ ಕರಂದ್ಲಾಜೆ ಸುದ್ದಿಗಾರರೊಂದಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದು ಹೇಳಿದ್ದಾರೆ. ‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆಯಾಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Leave A Reply

Your email address will not be published.