Political News: ಕಾಂಗ್ರೆಸ್‌ನಿಂದ ಬಿಜೆಪಿಯತ್ತ ಜಗದೀಶ್ ಶೆಟ್ಟರ್- ಮಾತುಕತೆ ಯಶಸ್ವಿ

ನವದೆಹಲಿ : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಸೇರ್ಪಡೆಯಾಗಲು ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ಈ ಮಾತುಕತೆಯೂ ಯಶಸ್ವಿಯಾಗಿದ್ದು, ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಿದ್ದಾರೆ ಎಂಬುದು ಖಚಿತವಾಗಿದೆ.

ಇದನ್ನೂ ಓದಿ: Temple: ಈ ದೇವಾಲಯಕ್ಕೆ ಭೇಟಿ ನೀಡಲು ಜನ ಹೆದರುತ್ತಾರೆ?? ಅದೇಕೆ ಗೊತ್ತಾ??

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರ ಅಂತಿಮ ಘಟ್ಟಕ್ಕೆ ತಲುಪಿದೆ. ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿರುವ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಹೈಕಮಾಂಡ್ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಸೇರ್ಪಡೆ ಆಗುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಶೆಟ್ಟರ್ ತಮ್ಮ ಆಪ್ತ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ‌ ಜೊತೆ ದೆಹಲಿ ತಲುಪಿದ್ದು, ಅಲ್ಲಿ ಬಿಜೆಪಿ ಸೇರ್ಪಡೆಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ. ಇದರ ನಂತರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ಕೂಡ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ಶೆಟ್ಟರ್ ಅವರ ಬಿಜೆಪಿ ಸೇರ್ಪಡೆಯ ಕುರಿತು ಚರ್ಚೆ ಮಾಡಿದ್ದಾರೆ.

Leave A Reply

Your email address will not be published.