Lakshmana savadi: ರಾಜ್ಯ ಕಾಂಗ್ರೆಸ್’ಗೆ ಮತ್ತೊಂದು ಶಾಕ್- ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆ??
Lakshmana savadi: ಕರ್ನಾಟಕ ರಾಜಕೀಯದಲ್ಲಿ ನಿನ್ನೆ ಮಹತ್ವದ ಬೆಳವಣಿಗೆಯಾಗಿದೆ. ಕೆಲ ಸಮಯದ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್, ಬಿಜೆಪಿಯ ವಿರುದ್ಧ ವಾಚಾಮ ಗೋಚರವಾಗಿ ವಾಗ್ದಾಳಿ ನಡೆಸುತ್ತಿದ್ದ ಜಗದೀಶ್ ಶೆಟ್ಟರ್(Jagadish shetter) ಅವರು ಭಾರೀ ಅಚ್ಚರಿಯ ಎಂಬಂತೆ ಮತ್ತೆ ಬಿಜೆಪಿಯನ್ನು ಸೇರಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ದೊಡ್ಡ ಆಘಾತ ಉಂಟಾಗಿದೆ. ಆದರೆ ಈ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಎದುರಾಗಿದೆ.
ಇದನ್ನೂ ಓದಿ: Congress Guarantees: ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ನಿಲ್ಲಲಿದೆ – ಹೆಚ್.ಡಿ.ಆರ್
ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಬಿಜೆಪಿಯ ಇಬ್ಬರು ಪ್ರಬಲ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವಧಿಯವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಆದರೆ ಇದೀಗ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರುವುದರ ಮೂಲಕ ಬಾರಿ ಅಚ್ಚರಿ ಮೂಡಿಸಿದ್ದಾರೆ. ಈ ಬೆನ್ನೆಲ್ಲೇ ಲಕ್ಷ್ಮಣ ಸವದಿ ಕೂಡ ಬಿಜೆಪಿಗೆ ಮರಳುತ್ತಾರೆ ಎಂಬ ಸುದ್ದಿ ಬಾರಿ ಸದ್ದು ಮಾಡುತ್ತಿದೆ. ಆದರೀಗ ಈ ಬಗ್ಗೆ ಲಕ್ಷ್ಮಣ ಸವದಿ(Lakshmana savadi)ಯವರು ಬಿಗ್ ಸ್ಟೇಟ್ಮೆಂಟ್ ನೀಡಿದ್ದಾರೆ.
ಇದನ್ನೂ ಓದಿ: Mangaluru News: ಕರಾವಳಿಯಲ್ಲಿ ತುಳುವರಿಂದ ಹೊಸ ಅಭಿಯಾನ!!! ಬೇಡಿಕೆ ಏನು?
ಈ ಬಗ್ಗೆ ಮಾತನಾಡಿದ ಅವರು ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಡಿ ಕೆ ಶಿವಕುಮಾರ್ ಜೊತೆ ಕೂಡ ಮಾತುಕತೆ ನಡೆಸಿದ್ದೇನೆ ಎಂದಿದ್ದಾರೆ. ಇಷ್ಟೇ ಅಲ್ಲದೆ ಶೆಟ್ಟರ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಯಾಕೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ಶೆಟ್ಟರ್ ಬಿಜೆಪಿಗೆ ಹೋಗಿರುವುದರಿಂದ ಕಾಂಗ್ರೆಸ್ಗೆ ಯಾವುದೇ ರೀತಿಯಲ್ಲೂ ಹಾನಿ ಆಗುವುದಿಲ್ಲ ಎಂದು ಹೇಳಿದ್ದಾರೆ.